Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋವಿಡ್ ವಾಕ್ಸಿನ್ ನಿರಾಕರಿಸಿದ ಮನೆಗಳಿಗೆ ತಹಶಿಲ್ದಾರ್ ಭೇಟಿ ಮನವೊಲಿಸಿ ಲಸಿಕೆ ವಿತರಣೆ -karavalivani

 


ಕೋಟ: ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಕೋವಿಡ್ ವಾಕ್ಸಿನ್ ನಿರಾಕರಿಸಿದ ಹಲವು ಮನೆಗಳಿಗೆ ಬ್ರಹ್ಮಾವರ ತಹಶಿಲ್ದಾರ್ ರಾಜಶೇಖರಮೂರ್ತಿ ಭೇಟಿ ನೀಡಿ ಮನವೊಲಿಸಿ ವಾಕ್ಸಿನ್   ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಕೊರೋನಾ ಹೊಸತಳಿಗಳ ಪ್ರಸರಣ ಬೇರೆ ಬೇರೆ ದೇಶಗಳಲ್ಲಿ ಹುಟ್ಟಿಕೊಳ್ಳುತ್ತಿದೆ.ಈ ಹಿನ್ನಲ್ಲೆಯಲ್ಲಿ ಆಯಾ ವ್ಯಾಪ್ತಿಯ ಗ್ರಾಮಪಂಚಾಯತ್‌ಗಳಲ್ಲಿ ವಾಕ್ಸಿನ ನಿರಾಕರಿಸಿ ಮನೆಗಳಿಗೆ ತೆರಳಿ ಮನವೊಲಿಸಿ ವಾಕ್ಸಿನ್ ನೀಡುವ ಕಾರ್ಯಕ್ಕೆ ಕೈಜೋಡಿಸಿಕೊಳ್ಳಲಾಗಿದೆ.ಜನಸಾಮಾನ್ಯರಿಗೆ ವಾಕ್ಸಿನ್ ಭಯ ಹೊಗಲಾಡಿಸಿ ಅದರ ಬಗ್ಗೆ ವಿಶೇಷವಾಗಿ ಅರಿವು ಮೂಡಿಸಿ ಲಸಿಕೆ ವಿತರಿಸಲು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.


ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ಕಾರ್ಯಕ್ರಮಗಳನ್ನು ಎಲ್ಲಾ ಗ್ರಾಮಗಳಿಗೆ ಭೇಟಿನೀಡಿ ಸಮಸ್ಯೆ ಆಲಿಸಿ ಲಸಿಕೆ ನೀಡಲಾಗುತ್ತಿದೆ.ಬ್ರಹ್ಮಾವರ ತಾಲೂಕು ಲಸಿಕೆ 100ಶೇಕಡಾ ಪೂರ್ಣಗೊಳಿಸಲು ಕಾರ್ಯೊನ್ಮುಖವಾಗಿದ್ದೇವೆ ಎಂದು ಅಭಿಪ್ರಾಯಪಟ್ಟರು

ಈ ಸಂದರ್ಭದಲ್ಲಿ ಕೋಟ ಕಂದಾಯ ನಿರೀಕ್ಷಕ ರಾಜು,ಕೋಟ ಗ್ರಾಮಲೆಕ್ಕಿಗ ಚಲುವರಾಜು,ಸಹಾಯಕ ರಾಜು ಕುಂದರ್, ಆಶಾಕಾರ್ಯಕರ್ತೆಯರು,ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close