Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಳದ ದೀಪೋತ್ಸವ ಸಂಪನ್ನ karavalivani

 


ಕೋಟ: ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನ ಹರ್ತಟ್ಟು ಕೋಟ ಇದರ ವಾರ್ಷಿಕ  ದೀಪೋತ್ಸವ ಕಾರ್ಯಕ್ರಮ ಭಾನುವಾರ ಸಂಪನ್ನಗೊoಡಿತು.

ದೇವಳದ ಒಳ ಸುತ್ತ ಪ್ರಾಂಗಣದಲ್ಲಿ ಭಕ್ತಾಧಿಗಳು ಹಣತೆ ದೀಪ ಹಚ್ಚುವ ಮೂಲಕ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ದೇವಳದ ಅರ್ಚಕ ಪ್ರತಿನಿಧಿ ಸುಧೀಂದ್ರ ಐತಾಳ್ ಧಾರ್ಮಿಕ ಕಾರ್ಯಗಳನ್ನು ನೆರವೆಸಿದರು.

ಪೂಜಾ ಕೈಂಕರ್ಯದ ನಂತರ ಭಕ್ತಾಧಿಗಳಿಗೆ ಫಲಹಾರದ ವ್ಯವಸ್ಥೆ ಕಲ್ಪಿಸಲಾಯಿತು.

ವಿಶೇಷವಾಗಿ ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರಿಂದ ಭಜನಾ ಕಾರ್ಯಕ್ರಮ ನೆರವೆರಿತು. ಅಲ್ಲದೆ ದೇವಳದ ವತಿಯಿಂದ ಭಜನಾ ತಂಡಕ್ಕೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು.

ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ  ಶೇವಧಿ ಸುರೇಶ್ ಗಾಣಿಗ,ಕಾರ್ಯದರ್ಶಿ ಹರೀಷ್ ದೇವಾಡಿಗ,ಸಮಿತಿಯ ಪ್ರಮುಖರಾದ ನಾಗರಾಜ್ ಗಾಣಿಗ,ಪ್ರಶಾಂತ್ ದೇವಾಡಿಗ,ಪ್ರದೀಪ್ ದೇವಾಡಿಗ,ಸಿದ್ಧ ದೇವಾಡಿಗ,ಭಜನಾ ತಂಡದ ವನೀತಾ ಉಪಾಧ್ಯಾ ಮತ್ತಿತರರು ಉಪಸ್ಥಿತರಿದ್ದರು.




Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close