Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬಾಳೆಕುದ್ರು- ಪಂಚವರ್ಣ ಯುವಕ ಮಂಡಲದ ಸ್ವಚ್ಛತಾ ಅಭಿಯಾನಕ್ಕೆ ಟೀ ಶರ್ಟ್ ಕೊಡುಗೆ,ಅನಾವರಣ-karavalivani


ಕೋಟ: ಪರಿಸರ ಸ್ವಚ್ಛತೆ ಅಥವಾ ಅದನ್ನು ಕಾಪಾಡುವ   ಮನಸ್ಥಿತಿ ಸರ್ವಶ್ರೇಷ್ಠವಾದದ್ದು ಈ ದಿಸೆಯಲ್ಲಿ ಪಂಚವರ್ಣ ಯುವಕ ಮಂಡಲ ಹಾಗೂ ಅದರ ಭಾಗವಾಗಿ ಕಾರ್ಯನಿರ್ವಹಿಸುವ ಸಂಘಸoಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ಶ್ರೀ ಶ್ರೀ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಹೇಳಿದ್ದಾರೆ.

ಕೋಟ ಪಂಚವರ್ಣ ಯುವಕ ಮಂಡಲದ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ,ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಯಕ್ಷ ಸೌರಭ ಕಲಾರಂಗ ಕೋಟ,ಮಹಿಳಾ ಬಳಗ ಹಂದಟ್ಟು ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಾನುವಾರ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ಶ್ರೀಮಠದಿಂದ ಕೊಡುಗೆಯಾಗಿ ನೀಡಿದ ಟೀ ಶರ್ಟ್ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆಗೊಳಿಸಿ ಆಶ್ರೀವಚನ ನೀಡಿ  ಈ ದೇಶದ ಪ್ರಧಾನಿ ಸ್ವಚ್ಛತಾ ಕಾರ್ಯಕ್ರಮದ ಆಂದೋಲನ ಹಮ್ಮಿಕೊಂಡ ಮರುಗಳಿಗೆಯಲ್ಲೆ ಆಯಾ ಭಾಗಗಳ ಸಂಘಸoಸ್ಥೆಗಳು,ಮಠ ಮಂದಿರಗಳು ನಿರಂತರವಾಗಿ ಈಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದಾರೆ.ಅದರಂತೆ ನಿಮ್ಮ  ಯುವಕ ಮಂಡಲಗಳ ನಿರಂತ ಈ ಕಾರ್ಯ ದೇವರು ಮೆಚ್ಚುವ ಕಾರ್ಯವಾಗಿದೆ.ಎಲ್ಲರನ್ನು ಒಗ್ಗೂಡಿಸಿಕೊಂಡು ನಿರ್ವಹಿಸವ ಕಾರ್ಯದಲ್ಲಿ ಯಶಸ್ಸು ಕಟ್ಟಿಟ್ಡಬುತ್ತಿ, ಪರಿಸರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಲಿ ಆ ಮೂಲಕ ಬಿದಿ ಬದಿಗಳಲ್ಲಿ ಎಸೆಯುವ ಕೈಗಳಿಗೆ ಹೊಸ ದಿಕ್ಕು ತೋರಿಸಿ ಪರಿಶುದ್ಧ ಪರಿಸರಕ್ಕೆ ಮುನ್ನುಡಿ ಬರೆಯುವ ಕೆಲಸ ಎಲ್ಲಾ ಭಾಗಗಳ ಸಂಘಟನೆಯ ಮೇಲಿರಲಿ ಎಂದರು.

ಪಾoಡೇಶ್ವರ ರಕ್ತೇಶ್ವರಿ ದೇವಳದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಮಾತನಾಡಿ ಸ್ವಚ್ಛತೆ ವಿಚಾರದಲ್ಲಿ  ಪ್ರತಿಯೊಬ್ಬರ ಜವಾಬ್ದಾರಿ ಹೆಚ್ಚಿಸುವ ಕೆಲಸ ನಾವುಗಳು ಮಾಡಬೇಕಿದೆ.

ಪರಿಸರ ಆರಾಧಿಸುವ ಮನೋಭಾವನೆ ಬೆಳಸಿಕೊಳ್ಳಬೇಕು ತನ್ಮೂಲಕ ಮುಂದಿನ ಪಿಳಿಗೆಗೆ  ಅದರ ಬಗ್ಗೆ ಅರಿವು ಮೂಡಿಸುವ ಕೆಲಸ ಸಂಘಸoಸ್ಥೆಗಳಿoದ ಆಗಲಿ ಎಂದು ಹಾರೈಸಿದರು.

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಮೃತ್ ಜೋಗಿ,ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಅಧ್ಯಕ್ಷೆ ವನೀತಾ ಉಪಾಧ್ಯ, ಮಹಿಳಾ ಬಳಗ ಹಂದಟ್ಟು ಅಧ್ಯಕ್ಷೆ ಪುಷ್ಭಾ .ಕೆ,ಪಂಚವರ್ಣ ಉಪಾಧ್ಯಕ್ಷ ಮನೋಹರ್ ಪೂಜಾರಿ ,ಸ್ಥಾಪಕ ಸದಸ್ಯ ನರಸಿಂಹ ಗಾಣಿಗ,ಸುಧೀರ್ ಕೊಯ್ಕೂರ್,ವಿಪ್ರ ಮಹಿಳಾ ಬಳಗದ ಜಯಲಕ್ಷ್ಮಿ  ರಾವ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಂಚವರ್ಣ ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ನಿರೂಪಿಸಿ ವಂದಿಸಿದರು.




Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close