ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ -karavalivani
ದಿನಾಂಕ:- 30.11.2021 ರಂದು ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮತ್ತು ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರವನ್ನು ಪಶು ಆಸ್ಪತ್ರೆ ಬ್ರಹ್ಮಾವರ ಆವರಣದಲ್ಲಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಗುಲಾಬಿ ಬಂಗೇರ, ಉಪಾಧ್ಯಕ್ಷರಾದ ಸದಾನಂದ ಪೂಜಾರಿ, ಸದಸ್ಯರಾದ ನಿರಂಜನ್ ಶೆಟ್ಟಿ, ನಾರಾಯಣ,ನವೀನ ಚಂದ್ರ ನಾಯಕ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪರ್ಜಾ£ ಉಪಸ್ಥಿತರಿದ್ದರು. ಬ್ರಹ್ಮಾವರ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ.ಅರುಣ್ ಕುಮಾರ್ ಶೆಟ್ಟಿ ಎನ್ ಇವರ ನೇತೃತ್ವದಲ್ಲಿ ANIMAL PROTECTION AND WELFARE SOCIETY ಸಂಸ್ಥೆಯ ಮುಖಾಂತರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
