Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಂದಿಗ್ಧ ಸಮಯದಲ್ಲಿ ಆಶಾಕಾರ್ಯಕಾರ್ತೆಯರ ಸೇವೆ ಅಮೂಲ್ಯವಾದದು-ಶ್ರೀ ಸುಬ್ರಹ್ಮಣ್ಯ ಪೂಜಾರಿ karavalivani


ಕೋಟ : ಕರೊನಾದಂತಹ ಸಂದಿಗ್ಧ ಸಮಯದಲ್ಲಿ ತಮ್ಮ ಜೀವನದ ಹಂಗು ತೊರೆದು ನಾಗರಿಕರ ಬಗ್ಗೆ ಆಶಾಕಾರ್ಯಕರ್ತೆಯರು ತೋರಿದ ಕಾಳಜಿ ಅಮೂಲ್ಯವಾದುದು, ಅವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಸರಕಾರ ಅವರ ಜೀವಾನೋಪಾಯಕ್ಕೆ ಭದ್ರತೆ ನೀಡಬೇಕು, ಅಲ್ಲದೇ ಸಮಾಜದ ಒಳಿತಿಗಾಗಿ  ಅವರ ತ್ಯಾಗ ಪರಿಶ್ರಮವನ್ನು ಸಮಾಜ ಗುರುತಿಸಬೇಕು ಎಂದು ಸ್ವಾಗತ್ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಪೂಜಾರಿ ಅವರು ಹೇಳಿದರು.

ಅವರು ಸ್ವಾಗತ್ ವಿವಿಧೋದ್ದೇಶ ಸಹಕಾರಿ ಸಂಘ(ನಿ)ಬಾರ್ಕೂರು ಇದರ ಸಾೖಬ್ರಕಟ್ಟೆ ಶಾಖೆ ಹಾಗೂ ಯುವವಾಹಿನಿ(ರಿ) ಯಡ್ತಾಡಿ ಘಟಕದ ವತಿಯಿಂದ ಕೊರೊನಾ ವಾರಿರ‍್ಸ್ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. 

17 ಆಶಾಕಾರ್ಯಕರ್ತೆಯರನ್ನು ಹಾಗೂ ಪಿಗ್ಮಿ ಸಂಗ್ರಹಕಾರದ ಕೆ.ಪಿ ಕೋಟಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸ್ವಾಗತ್ ವಿವಿಧೊದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಗೌರವ ಸಲಹೆಗಾರರು, ಸಿಬ್ಬಂದಿಗಳು, ಯುವವಾಹಿನಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close