Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನಕ್ಕೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ.-karavalivani


ಕೋಟ. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನಕ್ಕೆ  ರೋಟರಿ ಜಿಲ್ಲೆ 3182  ಇದರ ಜಿಲ್ಲಾ ಗವರ್ನರ್ ಎಂಜಿ ರಾಮಚಂದ್ರಮೂರ್ತಿ (ಶಿವಮೊಗ್ಗ)ಅವರ ಅಧಿಕೃತ ಭೇಟಿಯ ಅಹಿನ್ನಲ್ಲೆಯಲ್ಲಿ  ಸಾರ್ವಜನಿಕ ಸಮಾರಂಭ ಚೇತನ ಪ್ರೌಢಶಾಲೆಯ ಸಭಾಂಗಣದಲ್ಲಿ ಜರುಗಿತು.

ಕರ್ನಾಟಕ ಪುಷ್ಭ ರಂಗೋಲಿಯಲ್ಲಿ ದೀಪಗಳನ್ನು ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು 

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಯಶೋದ ಸಿ ಹೊಳ್ಳ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಗವರ್ನರ್ ಪರಿಚಯವನ್ನು ರೋಟರಿ ನಿಕಟಪೂರ್ವ ಅಧ್ಯಕ್ಷ ವೆಂಕಟೇಶ್ ಭಟ್ ಮಾಡಿದರು.ವಲಯ ಪ್ರತಿನಿಧಿ ವಿಜಯ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು . ವಲಯ 3ರ ಸಹಾಯಕ ಗವರ್ನರ್ ಕೆ ಪದ್ಮನಾಭ ಕಾಂಚನ್  ಕ್ಲಬ್‌ನ ಮುಖವಾಣಿ 'ಹಂಸ' ವಿಶೇಷ ಸಂಚಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಹಂಸ ಸಂಚಿಕೆಯ ಸಂಪಾದಕ ಮುರಳಿಧರ್ ನಾಯರಿ ಸಹಕರಿಸಿದರು. ಈ ಸಂದರ್ಭದಲ್ಲಿ ರೋಟರಿ ದತ್ತಿನಿಧಿಗೆ ದೇಣಿಗೆ ನೀಡಲಾಯಿತು. ರಾಜಾರಾಮ ಐತಾಳ ಆಹ್ವಾನಿತ ಗಣ್ಯರನ್ನು ಗುರುತಿಸಿದರು.

ಕಾರ್ಯದರ್ಶಿ ವಿಘ್ನೇಶ್ವರ ಅಡಿಗ ವಂದನಾರ್ಪಣೆ ಮಾಡಿದರು ಸದಸ್ಯ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close