ಮಧುವನ- ನೇತ್ರಾವತಿ ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ, ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಸರ್ವಸಮಾನಳು-ಚಂದ್ರಶೇಖರ ಶೆಟ್ಟಿ ಅಭಿಮತ-karavalivani
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬ್ರಹ್ಮಾವರ. ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಧುವನ ನೇತ್ರಾವತಿ ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಅತ್ರಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಬಾರ್ಕೂರು ಜನಜಾಗೃತಿ ಸದಸ್ಯ ಚಂದ್ರಶೇಖರ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಮಹಿಳೆಯರ ಸ್ವಾವಲಂಬಿ ಬದುಕಿಗೆ ಜ್ಞಾನವಿಕಾಸ ಮುನ್ನುಡಿ ಬರೆದಿದೆ ಪ್ರಸ್ತುತ ಕಾಲಘಟ್ಟದಲ್ಲಿ ಸ್ತ್ರಿ ಶೋಷಣೆಯಿಂದ ಮುಕ್ತರಾಗಿದ್ದಾಳೆ ಅವಳು ನಡೆಯುವ ದಾರಿ ಪುರುಷರಿಗೂ ಸರ್ವಸಮಾನಳಾಗಿ ನಿಂತ್ತಿದ್ದಾಳೆ ಹೊರಜಗತ್ತಿನೆಡೆಗೆ ಮುನ್ನುಗ್ಗಿ ತಮ್ಮ ಜೀವನದಲ್ಲಿ ಯಶಸ್ಸು ಕಾಣುತ್ತಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಉಡುಪಿ ವಕೀಲ ವಿಜಯ್ ಪೂಜಾರಿ ಮಹಿಳಾ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಹಾಗೂ ಮಕ್ಕಳ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ತಿಳಿಸುತ್ತಾ ಮಕ್ಕಳು ಯಾವ ರೀತಿ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಅದಕ್ಕೆ ಯಾವ ರೀತಿ ಜಾಗ್ರತೆ ವಹಿಸಬೇಕು. ಮಹಿಳಾ ದೌರ್ಜನ್ಯಕ್ಕೆ ಕಾರಣಗಳ ಬಗ್ಗೆ ಸವಿವರವಾಗಿ ತಿಳಿಸಿದರು.
ಅಧ್ಯಕ್ಷತೆಯನ್ನು ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಹಿಸಿದ್ದರು. ವಕೀಲರಾದ ಕುಮಾರಿ ಪ್ರಮೀಳಾ, ಜ್ಞಾನವಿಕಾಸ ಸಂಯೋಜಕಿ ಅನುಸೂಯ, ಕೇಂದ್ರದ ಎಲ್ಲಾ ಸರ್ವಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ನೇತ್ರಾವತಿ ನಿರೂಪಿಸಿ, ವಲಯದ ಮೇಲ್ವಿಚಾರಕಿ ಶಾಂತ ಸ್ವಾಗತಿಸಿ, ಸೇವಾ ಪ್ರತಿನಿಧಿ ಲಕ್ಷ್ಮಿ ವಂದಿಸಿದರು.
