Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಲ್ಪೆಯ ಪರಿಸರದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನ ರಕ್ಷಣೆ ಮಾಡಿದ ಹೊಸಬೆಳಕು ಆಶ್ರಮ karavalivani


ಮಲ್ಪೆ ಗಾಂಧೀಜಿ ಪ್ರತಿಮೆಯ ಬಳಿ ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನ ರಕ್ಷಣೆ ಮಾಡಲಾಯಿತು. ಊರು ದಾವಣಗೆರೆ, ಹೆಸರು ಮಲ್ಲಿಕಾರ್ಜುನ ಎಂದು ಹೇಳುತ್ತಿದ್ದಾರೆ. ಸರಿಯಾದ ಆಹಾರ ಇಲ್ಲದೆ ಸೊರಗಿದ್ದು, ಆರೋಗ್ಯದಲ್ಲಿ ಏರುಪೇರಾಗಿತ್ತು. ಮಲ್ಪೆಯ ಸಾರ್ವಜನಿಕರೊಬ್ಬರು ಕರೆ ಮಾಡಿ ಮಾಹಿತಿ ತಿಳಿಸಿದ ಕೂಡಲೇ ಆ ಯುವಕನ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಯುವಕನ ರಕ್ಷಣಾ ಕಾರ್ಯದಲ್ಲಿ  ಹೊಸಬೆಳಕು ಸಂಸ್ಥೆಯ ಸಂಸ್ಥಾಪಕರಾದ  ತನುಲಾ ತರುಣ್, ವಿನಯಚಂದ್ರ, ಸುಜಯಾ ಶೆಟ್ಟಿ, ಮಂಜುನಾಥ ಬೈಲೂರು ಸಹಕರಿಸಿದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close