Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಅಂತಾರಾಷ್ಟ್ರೀಯ ಈಜು ಸ್ಪರ್ಧೆಗೆ ಗುಂಡ್ಮಿ ಗೋಪಾಲ ಖಾರ್ವಿ ಆಯ್ಕೆ-karavalivani


ಕೋಟ: ಮಂಗಳೂರಿನಲ್ಲಿ ನಡೆದ ರಾಷ್ಟçಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ಅವರು ನಾಲ್ಕು ಪದಕ ಪಡೆದು ಅಂತಾರಾಷ್ಟ್ರೀಯ ಈಜು ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದಾರೆ. 

100 ಮೀ. ಫ್ರೀ ಸ್ಟೈಲ್   ನಲ್ಲಿ ಚಿನ್ನದ ಪದಕ, 400 ಮೀ. ಫ್ರೀ ಸ್ಟೈಲ್ ಬೆಳ್ಳಿ ಪದಕ, 200 ಮೀ. ಫ್ರೀಸ್ಟೈಲ್ ಕಂಚಿನ ಪದಕ, 4x50 ಮಿಡ್ಲೆ ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ. 

ಗೋಪಾಲ ಖಾರ್ವಿ ಉಡುಪಿಯ ಅಜ್ಜರಕಾಡು ಈಜುಕೊಳದ ತರಬೇತುದಾರರಾಗಿದ್ದು, 2013ರಲ್ಲಿ ಕೈ ಕಾಲುಗಳನ್ನು ಸ್ವಯಂ ಕೋಳದಿಂದ ಬಂಧಿಸಿ, ಸಮುದ್ರದಲ್ಲಿ 3.71 ಕಿ.ಮೀ. ಈಜಿ ಗಿನ್ನೆಸ್ ದಾಖಲೆ ಮಾಡಿದ್ದಾರೆ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಸಂದೇಶ ಪ್ರಶಸ್ತಿ ಲಭಿಸಿದೆ. ಒಂಬತ್ತನೇ ತರಗತಿಯ ಕೊಂಕಣಿ ಪಠ್ಯಪುಸ್ತಕದಲ್ಲಿ ಗೋಪಾಲ್ ಖಾರ್ವಿ ಅವರ ಜೀವನ ಚರಿತ್ರೆಯನ್ನು ಪಠ್ಯವಾಗಿ ಅಳವಡಿಸಲಾಗಿದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close