ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ ) ಬ್ರಹ್ಮಾವರ. ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಧುವನ ನೇತ್ರಾವತಿ -karavalivani
ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಅತ್ರಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬಾರ್ಕೂರು ಜನಜಾಗೃತಿ ಸದಸ್ಯರಾದ ಶ್ರೀಯುತ ಚಂದ್ರಶೇಖರ ಶೆಟ್ಟಿಯವರು ಉದ್ಘಾಟಿಸಿ ಮಹಿಳೆಯರ ಸ್ವಾವಲಂಬನೆ ಜ್ಞಾನವಿಕಾಸದಿಂದ ಸಾಧ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಯುತ ವಿಜಯ್ ಪೂಜಾರಿ ವಕೀಲರು ಉಡುಪಿ ಇವರು ಮಹಿಳಾ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಹಾಗೂ ಮಕ್ಕಳ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ತಿಳಿಸುತ್ತಾ ಮಕ್ಕಳು ಯಾವ ರೀತಿ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಅದಕ್ಕೆ ಯಾವ ರೀತಿ ಜಾಗ್ರತೆ ವಹಿಸಬೇಕು. ಮಹಿಳಾ ದೌರ್ಜನ್ಯಕ್ಕೆ ಕಾರಣಗಳನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಕೀಲರಾದ ಕುಮಾರಿ ಪ್ರಮೀಳಾ, ಜ್ಞಾನವಿಕಾಸ ಸಂಯೋಜಕಿ ಶ್ರೀಮತಿ ಅನುಸೂಯ, ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿಯಾದ ಶ್ರೀಮತಿ ನೇತ್ರಾವತಿ ನಿರೂಪಿಸಿ, ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಂತ ಸ್ವಾಗತಿಸಿ, ಸೇವಾ ಪ್ರತಿನಿಧಿ ಶ್ರೀಮತಿ ಲಕ್ಷ್ಮಿ ವಂದಿಸಿದರು.
