Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಮಹಾತೋಭಾರ ಹಿರೇಮಹಾಲಿಂಗೇಶ್ವರ ದೀಪೋತ್ಸವ ಸಂಪನ್ನ-karavalivani

ಕೋಟ: ಶ್ರೀ ಮಹಾತೋಭಾರ ಹಿರೇಮಹಾಲಿಂಗೇಶ್ವರ ದೇವಸ್ಥಾನ ಕೋಟ ಇದರ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಗುರುವಾರ ಶ್ರೀ ದೇವಳದಲ್ಲಿ ಸಂಪನ್ನಗೊoಡಿತು.

ಶ್ರೀ ದೇವಳದಲ್ಲಿ ಕಿರಿ ರಂಗಪೂಜೆ, ಉತ್ಸವ ಬಲಿ,ಕಟ್ಟೆ ಪೂಜೆ,ಶ್ರೀದೇವಳ ಪುಷ್ಕರಣಿಯಲ್ಲಿ ತೇಪೋತ್ಸವ ಕಾರ್ಯಕ್ರಮ ,ಪನ್ಯಾರ ಪ್ರಸಾದ ವಿತರಣೆ ಕಾರ್ಯಕ್ರಮಗಳು ನೆರವೆರಿತು.

ದೇವದ ಪ್ರದಾನ ಅರ್ಚಕ ರಾಜೇಂದ್ರ ಅಡಿಗ ,ತಂತ್ರಿಗಳಾದ ನರಸಿಂಹ ಸೋಮಯಾಜಿ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೆರಿತು. ಶ್ರೀ ದೇವಳ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಭಟ್,ಸದಸ್ಯರಾದ ಸದಾಶಿವ ಅಡಿಗ,ಆನಂದ ದೇವಾಡಿಗ,ಶ್ರೀಲಕ್ಷ್ಮಿ  ಪ್ರಭು, ಅರ್ಚಕರಾದ ಅನಂತಮೂರ್ತಿ ಭಟ್, ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close