Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಣೂರು ಪಡುಕೆರೆ- ಜೈಹಿಂದ್ ಕ್ರಿಕೆಟರ್ಸ್ ವತಿಯಿಂದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಸಾಧಕರಿಗೆ ಗೌರವ,ಅಶಕ್ತರಿಗೆ ನೆರವು-karavalivani

 
ಕೋಟ: ಜೈ ಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ ಜೈಹಿಂದ್ ಟ್ರೋಫಿ  2021 ಎಡು ದಿನಗಳ ಕಾಲ ನಡೆದ  ಕ್ರಿಕೆಟ್ ಪಂದ್ಯಾಟ ಶನಿವಾರ ವಿದ್ಯುಕ್ತವಾಗಿ ಚಾಲನೆ ದೊರಕಿತು.
ಕಾರ್ಯಕ್ರಮವನ್ನು  ಕೋಟ ಅಮೃತೇಶ್ವರಿ ದೇವಳದ ವ್ಯವಸ್ಥಾಪನಾ ಸಮಿತಿ  ಅಧ್ಯಕ್ಷ ಆನಂದ್ ಸಿ ಕುಂದರ್ ದೀಪ ಬೆಳಗಿಸಿ ಉದ್ಘಾಟಿಸಿದರು.
 ಈ ಸಂದರ್ಭದಲ್ಲಿ ಮಾತನಾಡಿ  ಈ ಕರಾವಳಿ ಭಾಗದಲ್ಲಿ ಆಯೋಜಿಸಲಾದ ಅತಿ ದೊಡ್ಡ ಕ್ರಿಕೆಟ್ ಪಂದ್ಯಾಟ ಇದಾಗಿದ್ದು ಬರೇ ಕ್ರೀಡೆಗೆ ಸೀಮಿತಗೊಳ್ಳದೆ ಅಶಕ್ತರಿಗೆ ,ಅನಾರೋಗ್ಯ ಪೀಡಿತರಿಗೆ ನೆರವು,ಸಾಧಕರಿಗೆ ಗೌರವಾರ್ಪಣೆಗಳಿಂದ ಕೂಡಿದ ಕ್ರೀಡಾಸ್ಪೂರ್ತಿಗೆ ಉತ್ತೇಜನ ನೀಡುವ ಕಾರ್ಯಕ್ರಮ ಇದಾಗಿದೆ.ಇಂಥಹ ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗಳ ಕಾರ್ಯ ಶ್ಲಾಘನೀಯ.ಯುವ ಮನಸ್ಸುಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸಿ ದೇಶ,ಅಂತಾರಾಷ್ಟಿçÃಯ ಪ್ರತಿನಿಧಿಸುವ ಕ್ರೀಡಾ ಜ್ಯೋತಿಯಾಗಿ ಮೆರೆಯಲಿ ಎಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷೆತೆಯನ್ನು  ಗುಂಡ್ಮಿ ಉದ್ಯಮಿ ವಸಂತ್ ಕಾಂಚನ್ ವಹಿಸಿದರು.
ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದ ಸಾಧಕರಾದ ರಾಜಾ ಸಾಲಿಗ್ರಾಮ, ಚಂದ್ರ ಚಾಲೆಂಜರ್ಸ್ ಕುಂದಾಪುರ,ಸಾಗರ್ ಭಂಡಾರಿ,ರವಿ ಹೆಗ್ಡೆ ಹಂಗಳೂರು ಇವರುಗಳನ್ನು ಸನ್ಮಾನಿಸಲಾಯಿತು. ವಿಶೇಷವಾಗಿ ಕೋಟದ ಜೀವ ರಕ್ಷಕ ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಪತ್ರಕರ್ತ ರವೀಂದ್ರ ಕೋಟ ಇವರುಗಳನ್ನು ಅಭಿನಂದಿಸಲಾಯಿತು.
ಅಶಕ್ತರಿಗೆ ಸಹಾಯಹಸ್ತ,ವಿದ್ಯಾರ್ಥಿ  ನಿಧಿ ವಿತರಣೆ,ಅನಾರೋಗ್ಯ ಪೀಡಿತರಿಗೆ ನೇರವು ನೀಡಲಾಯಿತು.
ಸಭೆಯಲ್ಲಿ ಉದ್ಯಮಿ ಬೀಜು ನಾಯರ್,ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಹೆಚ್ ಕುಂದರ್,ಕೋಟ ಅಮೃತೇಶ್ವರಿ ದೇವಳದ ಟ್ರಸ್ಟಿ ಎಂ ಸುಬ್ರಾಯ ಆಚಾರ್ಯ, ಬ್ರಹ್ಮಾವರ ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ,ಜೈಹಿಂದ್ ಕ್ರಿಕೆಟರ್ಸ್ ಗೌರವಾಧ್ಯಕ್ಷ ದೇವಪ್ಪ ಕಾಂಚನ್,ಕೋಟ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ,ಟೆನಿಸ್ ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷ ಶರತ್ ಶೆಟ್ಟಿ,ಅಧ್ಯಕ್ಷ ಗೌತಮ್ ಶೆಟ್ಟಿ, ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಪಡುಕರೆ ಇದರ ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ್,ಜೈಹಿoದ್ ಕ್ರಿಕೆಟರ್ಸ್ ಗೌರವ ಸಲಹೆಗಾರ ಎಂ.ಜಯರಾಮ ಶೆಟ್ಟಿ ಸಂಸ್ಥೆಯ ಸದಸ್ಯ ಪ್ರದೀಪ್ ಪುತ್ರನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜೈಹಿಂದ್ ಕ್ರಿಕೆಟರ್ಸ್ ನ ಸಂತೋಷ್ ಕುಮಾರ್ ಕೋಟ ಸ್ವಾಗತಿಸಿ ನಿರೂಪಿಸಿದರು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close