ಮೂಡುಗಿಳಿಯಾರು-15ರಿಂದ18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ-karavalivani,
ಕೋಟ: ಕೋಟ ಸಮುದಾಯ ಆರೋಗ್ಯ ಕೇಂದ್ರ ನೇತೃತ್ವದಲ್ಲಿ ಕೋಟ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಮೂಡುಗಿಳಿಯಾರು ಸಂಯುಕ್ತ ಪ್ರೌಢಶಾಲೆ ಇಲ್ಲಿನ 15ರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕ ಕಾರ್ಯಕ್ರಮ ಸೋಮವಾರ ಮೂಡುಗಿಳಿಯಾರು ಸೈಟ್ ಪ್ರೌಢಶಾಲಾ ಸಭಾಂಗಣದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶೇಖರ್ ಜಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯರಾದ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಯೋಗೇಂದ್ರ ಪೂಜಾರಿ, ಸುಚಿತ್ರ ಪಿ ಶೆಟ್ಟಿ , ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಗಿಳಿಯಾರ್, ಆಶಾ ಕಾರ್ಯಕರ್ತರು ಫೋಟೋ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.ಸಂಯುಕ್ತ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಶಿವರಾಮ ಭಟ್ ಪ್ರಸ್ತಾವನೆ ಸಲ್ಲಿಸಿದ್ದರು ಶಾಲಾ ಶಿಕ್ಷಕ ಶೇಖರ್ ಸ್ವಾಗತಿಸಿ ನಿರೂಪಿಸಿದರು.
