Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಆಧ್ಯಯನ ಕೇಂದ್ರ, ಕುಂದಾಪುರ ರಾಷ್ಟ್ರೀಯ ಯುವ ದಿನ ಮತ್ತು ರಾಷ್ಟ್ರೀಯ ಯುವ ಸಪ್ತಾಹ ಆಚರಣೆ-karavalivani,


ಕೋಟ: “ದೈಹಿಕ ಕ್ಷಮತೆಯ ಜೊತೆಯಲ್ಲಿ ಮಾನಸಿಕ ಕ್ಷಮತೆಯನ್ನು ಇಂದಿನ ಯುವ ಜನತೆ ರೂಡಿಸಿಕೊಳ್ಳಬೇಕಾದ ಅನಿವಾರ್ಯತೆ ಇಂದಿನ ದಿನದಲ್ಲಿ ಎದ್ದು ಕಾಣುತ್ತಿದೆ. ಜಂಗಮವಾಣಿಯ ದಾಸ್ಯ, ಗುರಿ ಇಲ್ಲದ ಬದುಕು ದೇಶದ ಸಂಸ್ಕೃತಿಯ ಬಗೆಗಿನ ಕಾಳಜಿಯ ಅವನತಿ ವ್ಯಕ್ತಿಯ ಅದ:ಪತನಕ್ಕೆ ಕಾರಣವಾಗುತ್ತದೆ” ಎಂದು ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ಪ್ರಾಂಶುಪಾಲ ಡಾ.ರಾಜೇಂದ್ರ ಎಸ್. ನಾಯಕ ಹೇಳಿದರು

 ಅವರು ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆ ಹಾಗು ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯುವ ಸಮುದಾಯದ ಸರ್ವಾಂಗೀಣ ಬೆಳವಣಿಗೆ ಹಾಗೂ ಉತ್ತೇಜಿಸುವ ಉದ್ದೇಶದಿಂದ 2022 ರ ಜನವರಿ 12 ರಿಂದ 18 ರವರೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ರಾಷ್ಟಿçÃಯ ಯುವ ದಿನ ಮತ್ತು ರಾಷ್ಟಿçÃಯ ಯುವ ಸಪ್ತಾಹದ ವಿದ್ಯುಕ್ತ ಉದ್ಘಾಟನೆಯನ್ನು ನೆರವೇರಿಸಿ ಯುವ ಜನತೆ ಬಗೆಗಿನ ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕ 1 ಮತ್ತು 2 ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಆಧಿಕಾರಿ ಡಾ. ಉಷಾದೇವಿ ಜೆ.ಎಸ್., ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ಕಾರ್ಯಕ್ರಮಾಧಿಕಾರಿಗಳಾದ ಸಂತೋಷ ನಾಯ್ಕ ಹೆಚ್ ಮತ್ತು ಡಾ. ಗೀತಾ ಎಂ ಉಪಸ್ಥಿತರಿದ್ಧರು. ಅಂತಿಮ ಬಿ ಕಾಂ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಅಂತಿಮ ಎಂ.ಕಾo ನ ನವೀನ ತನ್ನ ಅಭಿಪ್ರಾಯವನ್ನು ಈ ಸಂದರ್ಭದಲ್ಲಿ ಮಂಡಿಸಿದರು. ಕಾರ್ಯಕ್ರಮ ಸಂಘಟಕರಾದ ಸಂತೋಷ ನಾಯ್ಕ ಹೆಚ್. ಸ್ವಾಗತಿಸಿದರು. ಅನುಷಾ ಕೊಠಾರಿ ವಂದಿಸಿದರು. ಅನುಷಾ ಕಾರ್ಯಕ್ರಮ ನಿರ್ವಹಿಸಿದರು. 

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close