ಕೋಟ ಅಮೃತೇಶ್ವರಿ ಜಾತ್ರೆ ವಿಶೇಷ ಅಲಂಕಾರ karavalivani
ಕೋಟ:ಪುರಾಣ ಪ್ರಸಿದ್ಧ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರೀ ದೇವಿಗೆ ವಿಶೇಷ ಅಲಂಕಾರ ಹಾಗೂ ದೇವಳವನ್ನು ಫಲಪುಷ್ಭಗಳಿಂದ ಶೃಂಗರಿಸಲಾಗಿದೆ.ಸರಕಾರದ ಮಾರ್ಗಸೂಚಿಯಂತೆ ಕೋವಿಡ್ ನಿಯಮಾನುಸಾರ ಸರಳ ರೀತಿಯಲ್ಲಿ ಜಾತ್ರೆ ವ್ಯವಸ್ಥಿತವಾಗಿ ಜರಗಿತು.ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ,ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರು,ದೇವಳದ ಅರ್ಚಕ ಪ್ರತಿನಿಧಿಗಳು ಉಪಸ್ಥಿತಿಯಲ್ಲಿ ಜಾತ್ರೆಗೆ ಚಾಲನೆ ನೀಡಲಾಯಿತು
