ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಕೋಡಿಕನ್ಯಾನ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ಯುವ ಸಂಸತ್ ಕಾರ್ಯಕ್ರಮ-karavalivani,
ಕೋಟ: ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆ ಕೋಡಿಕನ್ಯಾನ ಇಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ಯುವ ಸಂಸತ್ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಜೀವನ ಹಾಗೂ ಸಂದೇಶಗಳನ್ನು ಸ್ಮರಿಸಲಾಯಿತು.
ಇದೇ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರಾಧಿಕಾ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಿಕ್ಷಕಿ ಶಶಿಕಲಾರವರು ಸ್ವಾಮಿ ವಿವೇಕಾನಂದರ ಕುರಿತು ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲಾ ಸಂಸತ್‌ನ್ನು ಉದ್ದೇಶಿಸಿ ವಿದ್ಯಾರ್ಥಿ ನಾಯಕ ಕು.ನಿಶ್ವಿತ್ ಕು.ಶರಣ್ಯ ಕು.ಕಾವ್ಯಾ ಕು.ಪ್ರತೀತಾ ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿದರು. ನಂತರ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ವಿದ್ಯಾರ್ಥಿ ಸದಸ್ಯರು ಭಾಗವಹಿಸಿ,ಶಾಲಾ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರೋಪಾಯಗಳನ್ನು ಕಂಡುಕೊoಡರು.
