Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಾಲಿಗ್ರಾಮ- ಬಿಡಾಡಿ ಗೋವಿಗಳಿಗೆ ಮುಕ್ತಿ -karavalivani

ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಿಡಾಡಿ ಗೋವುಗಳ ಹಾವಳಿ ದಿನದಿಂದ ದಿನಕ್ಕೆ ಅತಿಯಾದ ಹಿನ್ನಲ್ಲೆಯಲ್ಲಿ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ನಿರ್ದೇಶನದಂತೆ ಗುರುವಾರ ಸಾಲಿಗ್ರಾಮ ಸುತ್ತಮುತ್ತಲಿನ ಪರಿಸರದಲ್ಲಿ ಅಡ್ಡಾಡಿಕೊಂಡಿರುವ ಗೋವುಗಳನ್ನು ನೀಲಾವರದ ಗೋ ಶಾಲೆಗೆ ಕೊಂಡ್ಯೊಯುವ ಮೂಲಕ ಬೀಡಾಡಿ ಗೋವುಗಳ ಕಡಿವಾಣಕ್ಕೆ ಮುಂದಾಗಿದ್ದಾರೆ.
ಇದರಿಂದ ರಸ್ತೆಯಲ್ಲಿ ಅಪಘಾತ ಆಗುವ ಗೋವುಗಳಿಗೆ ಮುಕ್ತಿ ದೊರೆತಂತಾಗಿದೆ ಈಗಾಗಲೇ ಬೀಡಾಡಿ ಗೋವುಗಳು ರೈತರು ಬೆಳೆದ ಬೆಳೆಯನ್ನು ಹಾಳು ಮಾಡುತ್ತಿದ್ದವು ಮತ್ತು ಹಗಲು ರಾತ್ರಿ ರಸ್ತೆಗಳಲ್ಲಿ ನಿಂತು ವಾಹನ ಚಾಲಕರಿಗೆ ರಸ್ತೆಯಲ್ಲಿ ಸಮಸ್ಯೆ ಉಂಟು ಮಾಡುತ್ತಿದ್ದವು ಅದೆಷ್ಟು ವಾಹನ ಸವಾರರು ಸಣ್ಣಪುಟ್ಟ ಅಪಘಾತ ದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಈಗ ರೈತರು ಮತ್ತು ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ  
ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ,ಉಪಾಧ್ಯಕ್ಷೆ ಅನುಸೂಯ ಹೇರ್ಳೆ,ಸದಸ್ಯರಾದ ಸಂಜೀವ ದೇವಾಡಿಗ,ರತ್ನನಾಗರಾಜ್ ಗಾಣಿಗ,ಮುಖ್ಯಾಧಿಕಾರಿ ಶಿವ ನಾಯ್ಕ್,ಆರೋಗ್ಯ ನಿರೀಕ್ಷಕಿ ಮಮತಾ,ಪೌರಕಾರ್ಮಿಕರು ಉಪಸ್ಥಿತರಿದ್ದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close