Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸನಾತನ ಧರ್ಮದ ಸಂಸ್ಕೃತಿ ಉಳಿಕೆ ಮಹಿಳೆಯರ ಕೊಡುಗೆ ಅನನ್ಯ -ರಶ್ಮಿ ಕಾರಂತ-karavalivani

ಕೋಟ:  ಮಹಿಳಾ ವೇದಿಕೆ ಕೂಟ ಮಹಾಜಗತ್ತು ಸಾಲಿಗ್ರಾಮ ಸಾಲಿಗ್ರಾಮ ಅಂಗಸoಸ್ಥೆ ಇದರ ಮಹಾಸಭೆ ಇತ್ತೀಚಿಗೆ ಗುರುನರಸಿಂಹ ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆಯಿತು. 
ಮುಖ್ಯ ಅಭ್ಯಾಗತರಾಗಿ ಬಿ.ಎಸ್.ಎನ್.ಎಲ್ ನಿವೃತ್ತ ಅಧಿಕಾರಿ  ರಶ್ಮಿ ಕಾರಂತ  ಮಾತನಾಡಿ ನಮ್ಮ ಸನಾತನ ಧರ್ಮ ಹಾಗೂ ಸಂಸ್ಕೃತಿಗಳನ್ನು  ಉಳಿಸುವ ಕೆಲಸ ಮಹಿಳೆಯರಿಂದ ಸಾಧ್ಯ ಎಂದು ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
 ಮುಖ್ಯ ಅತಿಥಿ  ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎಸ್.ಕಾರಂತ, ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗಸAಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ ಶುಭ ಹಾರೈಸಿದರು. ಮಹಿಳಾ ವೇದಿಕೆ ಅಧ್ಯಕ್ಷೆ ಯಶೋದ ಸಿ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶ್ರೀಮತಿ ಮಯ್ಯ ಸ್ವಾಗತಿಸಿದರು. ಕಾರ್ಯದರ್ಶಿ ಲತಾ ಹೊಳ್ಳ ವರದಿ ಓದಿದರು. ಖಜಾಂಚಿ ಗೀತಾ ಅಧಿಕಾರಿ ಲೆಕ್ಕ ಪತ್ರ ಮಂಡಿಸಿದರು. ಈ ಸಂದರ್ಭದಲ್ಲಿ  ಅಶಕ್ತ ಮಹಿಳೆಯರಿಗೆ ನೆರವು, ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ನಾಗರತ್ನ ಹೇರ್ಳೆ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಭಾರತಿ ಪ್ರಕಾಶ್ ಹೇರ್ಳೆ ಸದಸ್ಯರ ವಿವರಪಟ್ಟಿ ವಾಚಿಸಿದರು. ಜೊತೆ ಕಾರ್ಯದರ್ಶಿ ವಸುಧಾ ಉಡುಪ ಧನ್ಯವಾದಗೈದರು ಶುಭ ಭಾಗವತ ಮತ್ತು ತಂಡ ಹಾಗೂ ಅಮೃತ ಉಪಾಧ್ಯ ಮತ್ತು ತಂಡದವರಿoದ ನೃತ್ಯ ಕಾರ್ಯಕ್ರಮ ನಡೆಯಿತು. ಪೂರ್ಣಿಮಾ ಅಧಿಕಾರಿ ಕಾರ್ಯಕ್ರಮ ನಿರೂಪಿಸಿದರು.
 ಬಿ.ಎಸ್.ಎನ್.ಎಲ್ ನಿವೃತ್ತ ಅಧಿಕಾರಿ  ರಶ್ಮಿ ಕಾರಂತ, ಮುಖ್ಯ ಅತಿಥಿ  ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎಸ್.ಕಾರಂತ  ಮಹಿಳಾ ವೇದಿಕೆ ಅಧ್ಯಕ್ಷೆ ಯಶೋದ ಸಿ ಹೊಳ್ಳ, ಉಪಾಧ್ಯಕ್ಷೆ ಶ್ರೀಮತಿ ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close