ಯುವ ಪೀಳಿಗೆಗಾಗಿ ವಿವೇಕಾನಂದ ಜಯಂತಿ ಆಚರಣೆಯನ್ನು ವಿಶೇಷ ರೀತಿಯಲ್ಲಿ ಆಚರಿಸಿದ ಯುವಕ ಯುವತಿಯರು*-karavalivani
ಜನವರಿ 12ರಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ ಅರಸಮ್ಮಕಾನು ಇಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯ ಸಲುವಾಗಿ ಶಾಲೆಯ ಹಳೆ ವಿದ್ಯಾರ್ಥಿಗಳು ಸೇರಿ ಸುಮಾರು ಮುನ್ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಸಂತ ಪೂಜಾರಿರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ವೆಂಕಟರಮಣ ಪೂಜಾರಿ ಇವರ ನೇತೃತ್ವದಲ್ಲಿ ಪುಸ್ತಕಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಶಾಲೆಯ ನಿವೃತ್ತ ಶಿಕ್ಷಕರಾದ ಅಣ್ಣಯ್ಯ ಶೆಟ್ಟಿ ಶಿವರಾಮಶೆಟ್ಟಿ , ಅನಂತ ತಂತ್ರಿ , ನಿವೃತ್ತ ಅರಣ್ಯಾಧಿಕಾರಿಗಳಾದ ರತ್ನಾಕರ ಶೆಟ್ಟಿ , ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಮತ್ತು ಶಾಲಾ ಆರ್ಥಿಕ ಸಮಿತಿಯ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಇವರ ಉಪಸ್ಥಿತಿ ಯೊಂದಿಗೆ ಕೋವಿಡ್ ಮಾರ್ಗಸೂಚಿಯಂತೆ ಸರಳ ರೀತಿಯಲ್ಲಿ ಕಾರ್ಯಕ್ರಮವು ನೆರವೇರಿತು.ಹಾಗೂ ಹೆಮ್ಮೆಯ ಹಳೆ ವಿದ್ಯಾರ್ಥಿಗಳು,ಪೋಷಕವ್ರಂದ ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು
