Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ದಿ.ಮಂಜುನಾಥ್ ಸ್ಮಾರಕ ಪುರಸ್ಕಾರಕ್ಕೆ ಬಿ. ಎಸ್ ರಾಮ್ ಶೆಟ್ಟಿ ಹಾರಾಡಿ ಆಯ್ಕೆ -karavalivani

ಕರಾವಳಿವಾಣಿ
ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡಮಾಡುವ ರಂಗಕರ್ಮಿ ಬಹುಮುಖ ಪ್ರತಿಭೆ ದಿ. ಮಂಜುನಾಥ ಕೋಟ ಅವರ ಸ್ಮರಣಾರ್ಥ ಕೊಡಮಾಡುವ ತಿಂಗಳ ದತ್ತಿ ಪುರಸ್ಕಾರಕ್ಕೆ ರಂಗಕರ್ಮಿ ಬಿ.ಎಸ್ ರಾಮ್ ಶೆಟ್ಟಿ ಹಾರಾಡಿ ಅವರು ಆಯ್ಕೆಯಾಗಿದ್ದಾರೆ. 
ಬಿ ಎಸ್ ರಾಮ್ ಶೆಟ್ಟಿ ಅವರು ವೃತ್ತಿಯಲ್ಲಿ ವಿದ್ಯಾ ಮಂದಿರ ಹಾರಾಡಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಭೂಮಿಕಾ(ರಿ) ಎನ್ನುವ ರಂಗ ತಂಡ ಕಟ್ಟಿಕೊಂಡು ಹಲವಾರು ಯುವ ಪ್ರತಿಭೆಗಳನ್ನು ರಂಗಕ್ಕೆ ಪರಿಚಯಿಸಿದ್ದಾರೆ. ಕಳೆದ 28 ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಾಟಕ ನಿರ್ದೇಶಿಸಿದ್ದಾರೆ. ಕನ್ನಡದ ಖ್ಯಾತ ನಾಟಕಗಾರರ ನಾಟಕಗಳನ್ನು ರಂಗಕ್ಕೆ ತಂದಿದ್ದಾರೆ. ಸಂಗ್ಯಾ ಬಾಳ್ಯಾ, ಮೃಗತ್ರಷ್ಣ, ಅಗ್ನಿಲೋಕ, ನಮ್ಮ ನಿಮ್ಮೊಳಗೊಬ್ಬ, ಅರಗಿನ ಬೆಟ್ಟ, ಮಾರನಾಯಕ, ಹುಲಿಯ ನೆರಳು, ಕತ್ಯಾಯಿನಿ, ವ್ರತ್ತದ ವ್ರತ್ತಂತ, ಗಿಡ ಮರ ಬಳ್ಳಿ, ಸೂರ್ಯಸ್ತದಿಂದ ಸೂರ್ಯೋದಯದವರೆಗೆ, ಆರದಿರಲಿ ಬೆಳಕು, ಅಲಿಬಾಬಾ ಮತ್ತು 40 ಕಳ್ಳರು, ಸೂರ್ಯ ಬಂದ, ಮಹಾಮಾಯಿ, ಶಿವಭೂತಿ, ಅವಿವೇಕಿ ರಾಜ ಮತ್ತು ಅರೆಹುಚ್ಚ ಮಂತ್ರಿ , ಸುಣ್ಣದ ಸುತ್ತ, ಹೀಗೆ ಹಲವಾರು ನಾಟಕಗಳನ್ನು ನಿರ್ದೇಶಿಸಿದ್ದಾರೆ. 3 ಬಾರಿ ರಾಷ್ಟç ಮಟ್ಟದ ನಾಟಕ ಸ್ಪರ್ಧೆಯಲ್ಲಿ ಶ್ರೇಷ್ಠ ನಿರ್ದೇಶಕ, 5 ಬಾರಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಶ್ರೇಷ್ಠ ನಿರ್ದೇಶಕ, ಶ್ರೇಷ್ಠ ಬೆಳಕು, ರಂಗ ಪರಿಕರದಲ್ಲೂ ಬಹುಮಾನಗಳು ಲಭಿಸಿದೆ. ಅಲ್ಲದೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಸ್ವರ್ಣಕಮಲ ಕುವೆಂಪು ಪ್ರಶಸ್ತಿ, ಸಿ ಜಿ ಕೆ ರಂಗ ಪುರಸ್ಕಾರ, ರಂಗ ಸವ್ಯಸಾಚಿ ಪ್ರಶಸ್ತಿ ಕೂಡಾ ಲಭಿಸಿದೆ.
ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ 14 ರಂದು ಸಂಜೆ 6 ಗಂಟೆಗೆ ನಡೆಯುವ ದಿ. ಮಂಜುನಾಥ್ ಕೋಟ ದತ್ತಿ ಪುರಸ್ಕಾರ, ಯಕ್ಷಗಾನ ವಿಚಾರ ಗೋಷ್ಠಿ ಹಾಗೂ ಯಕ್ಷ ‘ಗಾನ’ ವೈಭವ ಕಾರ್ಯಕ್ರಮ ಒಡ್ಡೋಲಗ-2022(ನೆನಪಿನ ಕಾವಳ) ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close