Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಆರೋಗ್ಯದ ಬಗ್ಗೆ ನಿರ್ಲಕ್ಷ ಬೇಡ- ಶ್ರೀ ಪದ್ಮನಾಭ ಕಾಂಚನ್-karavalivani,



ಕೋಟ : ಬದುಕಿನಲ್ಲಿ ಆರೋಗ್ಯ ಉತ್ತಮವಾಗಿದ್ದರೆ ಎಲ್ಲವೂ ಇದ್ದಂತೆ, ಆರೋಗ್ಯದ ಬಗ್ಗೆ ಜಾಗೃತವಾಗಿದ್ದು , ಆಗಾಗ ಆರೋಗ್ಯ ತಪಾಸಣೆ ಮಾಡುತ್ತಾ ಸುಂದರ ಆರೋಗ್ಯ ಜೀವನ ನಡೆಸಬೇಕು, ಸಾೖಬ್ರಕಟ್ಟೆ ರೋಟರಿ ಕ್ಲಬ್  ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿಯಾಗಿ ಆಯೋಜಿಸಿದ ಇಂತಹ  ಆರೋಗ್ಯ ತಪಾಸಣ ಶಿಬಿರ  ಅರ್ಥಪೂರ್ಣವಾಗಿದ್ದು ಸಾರ್ವಜನಿಕರಿಗೆ ಸಹಕರಿಯಾಗಿದೆೆ ಎಂದು ರೋಟರಿ ವಲಯ 3 ರ ಸಹಾಯಕ ಗವರ್ನರ್ ಪದ್ಮನಾಭ್ ಕಾಂಚನ್ ಅವರು ಹೇಳಿದರು.


ಅವರು ರೋಟರಿ ಕ್ಲಬ್ ಸಾೖಬ್ರಕಟ್ಟೆ ಸಾರಥ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ರೋಟರಿ ಸಮುದಾಯ ದಳ ಸಾೖಬ್ರಕಟ್ಟೆ ದಂತ ಮೇಡಿಕಲ್ ಕಾಲೇಜು ಮಣಿಪಾಲ , ರೋಟರಿ ಸಮುದಾಯ ದಳ ಶಿರಿಯಾರ, ರೋರ‍್ಯಾಕ್ಟ್ ಕ್ಲಬ್ ಮಾನ್ಯ, ವೈದ್ಯಕೀಯ ಪ್ರತಿನಿಧಿಗಳ ಸಂಘ(ರಿ) ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆಯ ನುರಿತ ವೈದ್ಯರಿಂದ ಉಚಿತ ದಂತ ಚಿಕಿತ್ಸೆ ಹಾಗೂ ಚರ್ಮರೋಗ ತಪಾಸಣಾ ಶಿಬಿರವನ್ನು ಸಾೖಬ್ರಕಟ್ಟೆಯ ಸ್ವಾಗತ್ ಮಿನಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.  


ಕಸ್ತೂರ್ಬಾ ಆಸ್ಪತ್ರೆಯ ಚರ್ಮ ತಪಾಸಣೆಯ ವೈದ್ಯ ಶ್ರೀ ಡಾ. ವಿನಯ್ ಅಂಚನ್ ಮಾತನಾಡಿ ಕಾಲ ಕಾಲಕ್ಕೆ ಸೂಕ್ತ ವೈದ್ಯಕೀಯ ತಪಾಸಣೆಯಿಂದ ಉತ್ತಮ ಆರೋಗ್ಯದಿಂದ ಇರಬಹುದು, ಕಾಯಿಲೆ ಬರುವ ಮುಂಚೆ ಜಾಗೃತರಾಗಿ ಇರುವುದು ಅವಶ್ಯಕ ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾೖಬ್ರಕಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಶ್ರೀ ಯು ಪ್ರಸಾದ್ ಭಟ್ ವಹಿಸಿದ್ದರು.

ವೇದಿಕೆಯಲ್ಲಿ ಮಣಿಪಾಲ ದಂತ ಕಾಲೇಜ್ ವೈದ್ಯ ಡಾ. ಜೀವನ್, ವೈದ್ಯಕೀಯ ಪ್ರತಿನಿಧಿಗಳ ಸಂಘದ ಕಾರ್ಯದರ್ಶಿ ಶ್ರೀ ಪ್ರಸನ್ನ ಕಾರಂತ್ , ರೋಟರಿ ವಲಯ ಸೇನಾನಿ ಶ್ರೀ ವಿಜಯ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಶ್ರೀ ಅಣ್ಣಯ್ಯ ದಾಸ್ , ಸಾೖಬ್ರಕಟ್ಟೆ ರೋಟರಿ ಸಮುದಾಯದಳದ ಅಧ್ಯಕ್ಷ ಶ್ರೀ ಪ್ರಶಾಂತ್ ಪೂಜಾರಿ, ಶಿರಿಯಾರದ ಶ್ರೀ ಶರತ್ ಕೆ, ರೋರ‍್ಯಾಕ್ಟ್ ಕ್ಲಬ್‌ನ ಕಾರ್ಯದರ್ಶಿ ದ್ರುವಿನ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಥಾಮಸ್ ನಿರೂಪಿಸಿದರು.

 

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close