Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಸಹಕಾರಿ ವ್ಯವಸಾಯಕ ಸಂಘ ಇಲ್ಲಿ ಸೇವಾ ನಿವೃತ್ತಿ - ಬೀಳ್ಕೊಡುಗೆ ಸಮಾರಂಭ karavalivani


 ಕೋಟ: ಕಳೆದ 19 ವರ್ಷಗಳಿಂದ ಕೋಟ ಸಹಕಾರಿ ವ್ಯವಸಾಯಕ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ತಮ್ಮ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಹಿರಿಯ ಸಹಾಯಕಿ ಲೀಲಾವತಿ ಡಿ.31 ರಂದು ಸೇವಾ ನಿವೃತ್ತಿ ಹೊಂದಿದರು. 
ಅದರಂತೆ ಜ.4 ರಂದು ಸಂಘದ ಪ್ರಧಾನ ಕಛೇರಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ  ಜಿ. ತಿಮ್ಮ ಪೂಜಾರಿ ಅಧ್ಯಕ್ಷತೆಯಲ್ಲಿ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ಜಿ. ರಾಜೀವ ದೇವಾಡಿಗ, ನಿರ್ದೇಶಕರಾದ ಡಾ. ಕೃಷ್ಣ ಕಾಂಚನ್,  ರವೀಂದ್ರ ಕಾಮತ್,  ಪ್ರೇಮಾ  ಪೂಜಾರಿ, ಕುಮಾರಿ ರಶ್ಮಿತಾ,  ವಸಂತ ಶೆಟ್ಟಿ,  ಗುಲಾಬಿ ಉಪಸ್ಥಿತರಿದ್ದರು. 
     ಸಹಾಯಕ ಕಾರ್ಯನಿರ್ವಹಣಾಧಿಕಾರಿ  ಕುಮಾರ್ ಇವರು ನಿವೃತ್ತರ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿವೃತ್ತ ಮತ್ತು ಹಾಲಿ ಸಿಬ್ಬಂದಿಯವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಶರತಕುಮಾರ್ ಶೆಟ್ಟಿ ಇವರು ಗಣ್ಯರನ್ನು ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು. 

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close