Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶಿರಿಯಾರ ಹಿ.ಪ್ರಾ. ಶಾಲೆ: ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಉದ್ಘಾಟನೆ; ಬೀಳ್ಕೊಡುಗೆ ಸಮಾರಂಭ Karavalivani

ಕರಾವಳಿವಾಣಿ
ಕೋಟ: ಶಿರಿಯಾರ ಸ.ಹಿ.ಪ್ರಾ.ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ಹಾಗೂ ಸ್ಪೋಕನ್ ಇಂಗ್ಲಿಷ್  ಕ್ಲಾಸ್ ಉದ್ಘಾಟನೆ, ವರ್ಗಾವಣೆಗೊಂಡ  ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಜರಗಿತು. 
ಶಾಲೆಯ ಹಳೆ ವಿದ್ಯಾರ್ಥಿ, ಲಂಡನ್‌ನ ಉದ್ಯೋಗಿ  ಗಣೇಶ ಗಾಣಿಗ ಶಿರಿಯಾರ ಕೊಡ ಮಾಡಿದ  ಸ್ಪೋಕನ್ ಇಂಗ್ಲೀಷ್ ತರಗತಿಯನ್ನು ವೇದಮೂರ್ತಿ ಕೊಡೆಕಟ್ಟು ಮಂಜುನಾಥ ಉಪಾಧ್ಯ ಉದ್ಘಾಟಿಸಿ ಶುಭ ಹಾರೈಸಿದರು. 
ಶಿರಿಯಾರ ಗ್ರಾ.ಪಂ. ಅಧ್ಯಕ್ಷ ಸುಧೀಂದ್ರ ಶೆಟ್ಟಿ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಕೊಡುಗೆ ಅತ್ಯಗತ್ಯ. ನಮ್ಮೂರ ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಊರಿನವರು ಕೈಜೋಡಿಸಬೇಕು  ಎಂದರು. 
ಎಸ್.ಡಿ.ಎಂ.ಸಿ ಅಧ್ಯಕ್ಷ ದಿನಕರ್ ಕಾಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 
ಈ ಸಂದರ್ಭ ಇಲಾಖೆಯಲ್ಲಿ  ಭಡ್ತಿ ಪಡೆದು ವರ್ಗಾವಣೆಗೊಂಡ ಶಿಕ್ಷಕಿ ಶುಭ ಎಸ್ ಸುವರ್ಣ ಅವರನ್ನು ಊರವರ ವತಿಯಿಂದ ಸನ್ಮಾನಿಸಲಾಯಿತು ಹಾಗೂ  ಹಳೆ ವಿದ್ಯಾರ್ಥಿಗಳಾದ ಗುರುಚರಣ ಮತ್ತು ತಂಡದವರು ಕೊಡಮಾಡಿ ಕಂಪ್ಯೂಟರ್ ಹಸ್ತಾಂತರ ಜರಗಿತು. 
   ಮುಖ್ಯ ಅತಿಥಿಗಳಾಗಿ ರವೀಂದ್ರನಾಥ ಶೆಟ್ಟಿ ಕೊಳ್ಕೆಬೈಲು, ಸಂದೀಪ್ ಕುಮಾರ್ ಶೆಟ್ಟಿ, ಶಿರಿಯಾರ ಮೇಲ್ಮನೆ, ಪ್ರಸಾದ ಶೆಟ್ಟಿ ಕೊಳ್ಕೆಬೈಲು, ಪ್ರದೀಪ್ ಕುಮಾರ್ ಶೆಟ್ಟಿ ಕೊಳ್ಕೆಬೈಲು,ಆನಂದ ಮರಕಾಲ ಶಿರಿಯಾರ, ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜೀವ ಮರಕಾಲ, ಬಾಲಕೃಷ್ಣ ಶೆಟ್ಟಿ ಎತ್ತಿನಟ್ಟಿ, ಲಕ್ಷ÷್ಮಣ ಎಚ್.ಎಸ್, ವಾಸುದೇವ. ಕೆ.,  ಗ್ರಾ.ಪಂ. ಉಪಾಧ್ಯಕ್ಷೆ ಅಮಿತಾ, ಸದಸ್ಯ ಸಂಜೀವ ಪೂಜಾರಿ, ಭಾರತಿ, ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಉದಯ , ಸಮೂಹ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಮೊಗವೀರ, ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಗೋಪಾಲಕೃಷ್ಣ ಗಾಣಿಗ , ವಿಜಯ್ ಕುಮಾರ್ ಮತ್ತು ಶಿಕ್ಷಕರು , ಊರಿನವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಸಾಧು ಸೇರಿಗಾರ್ ಬೆನಗಲ್ ಸ್ವಾಗತಿಸಿ,  ಸಹ ಶಿಕ್ಷಕಿ ಶೀಲಾ ಕಾರ್ಯಕ್ರಮ ನಿರೂಪಿಸಿದರು. ವಾಣಿಶ್ರೀ ವಂದಿಸಿದರು. 


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close