Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಸಹಕಾರಿ ವ್ಯವಸಾಯಕ ಸಂಘದ ವತಿಯಿಂದ ಜನೌಷಧ ಕೇಂದ್ರ, ಕೃಷಿ ಮಳಿಗೆ,ರೈತ ಸಂಜೀವಿನಿ ಕ್ರೆಡಿಟ್ ಕಾಡ್೯ ವಿತರಣೆ -Karavalivani

ಕೋಟ: ಸಹಕಾರಿ ಕ್ಷೇತ್ರದಲ್ಲಿ ಕೋಟ ಕೃಷಿ ಪತ್ತಿನ ಸಹಕಾರಿ ವ್ಯವಸಾಯಕ ಸಂಘ ಜನೌಷಧ ಮಳಿಗೆ ಪ್ರಾರಂಭಿಸಿ ಹೊಸ ಭಾಷ್ಯ ಬರೆದಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಬೆಂಗಳೂರು ಇದರ ಅಧ್ಯಕ್ಷ ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಹೇಳಿದ್ದಾರೆ 
ಸೋಮವಾರ ಕೋಟ ಸಹಕಾರಿ ವ್ಯವಸಾಯಕ ಸಂಘದ ನೇತ್ರತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಧಾನಮಂತ್ರಿ ಜನೌಷಧ ಕೇಂದ್ರ  ಮತ್ತು ಕೃಷಿ ಮಳಿಗೆ,ರೈತ ಸಂಜೀವಿನಿ ಕ್ರೆಡಿಟ್ ಕಾಡ್೯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲೆ ಅಲ್ಲ ದೇಶದಲ್ಲೆ ಮೊಟ್ಟ ಮೊದಲ ಬಾರಿಗೆ ಒಂದು ಸಹಕಾರಿ ರಂಗ ಜನೌಷಧ ಮಳಿಗೆ ಸ್ಥಾಪಿಸಿ ಜನಸಾಮಾನ್ಯರಿಗೆ ನೇರವಾಗುವ ಕಾರ್ಯಕ್ರಮ ರೂಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.ಅಷ್ಟೆ ಅಲ್ಲದೆ ರೈತರಿಗೆ ಅನುಕೂಲಕರ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕೃಷಿ ಮಳಿಗೆ,ಕ್ರೆಡಿಟ್ ಕಾಡ್೯ ವಿತರಿಸುವ ಮೂಲಕ ಎಲ್ಲಾ ರಂಗದಲ್ಲೂ ಸೈ ಎನ್ನಿಸಿಕೊಂಡಿದೆ.
ಕೇoದ್ರ ಮಾಜಿ ಸಚಿವರ ಚಿಂತನೆಯoತೆ ಸಹಕಾರಿ ಕ್ಷೇತ್ರದಲ್ಲಿ ಜನೌಷಧ ಮಳಿಗೆ ತೆರೆದು ಬಡವರ ಹಾಗೂ ಮಧ್ಯಮವರ್ಗದವರಿಗೆ ಕಡಿಮೆ ವೆಚ್ಚದಲ್ಲಿ ಔಷಧ ಸಿಗುವಂತೆ ಕಾರ್ಯಕ್ರಮ ರೂಪಿಸಿದ್ದಾರೆ ಇದು ಶ್ಲಾಘನಾರ್ಹ,
ಇಂದು ಸಹಕಾರಿ ರಂಗ ಮಂಚೂಣಿಗೆ ಬರಲು ಮಾಧ್ಯಮಗಳ ಪಾಲು ಅನನ್ಯವಾದದ್ದು ಎಂದರಲ್ಲದೆ ಸಹಕಾರಿ ರಂಗ ಸಾಲ ನೀಡುವುದಕ್ಕೆ ಸೀಮಿತಗೊಳ್ಳದೆ ಆರೋಗ್ಯ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲೂ ಮುನ್ನುಗ್ಗುತ್ತಿದೆ.
ಈ ದಿಸೆಯಲ್ಲಿನಿಮ್ಮ ಸಂಸ್ಥೆಯನ್ನು ವಿಶೇಷವಾಗಿ ಅಭಿನಂದಿಸುತ್ತೇನೆ,
ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಸಹಕಾರಿ ಕ್ಷೇತ್ರ ನೀಡುತ್ತಿದೆ ಈ ನಿಟ್ಟಿನಲ್ಲಿ ಅವಿಭಜಿತ ಜಿಲ್ಲೆಗಳಲ್ಲಿ ಒಂದೇ ಒಂದು ರೈತರು ಆತ್ಮಹತ್ಯೆಗೊಳಗಾಗಲಿಲ್ಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಇದು ನಮ್ಮ ಹೆಮ್ಮೆಯಾಗಿದೆ.ಎಂದು ಅಭಿಪ್ರಾಯಪಟ್ಟರು.
ರೈತ ಸಂಜೀವಿನಿ ಕ್ರೆಡಿಟ್ ಕಾಡ್೯ ಹಾಗೂ ಕೃಷಿ ಮಳಿಗೆಯನ್ನು ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಕೋಟ ಸಹಕಾರಿ ವ್ಯವಸಾಯಕ  ಬ್ಯಾಂಕ್ ನಲ್ಲಿ ಸಾಲ ಪಡೆದ  ಸದಸ್ಯ ಮೃತಪಟ್ಟರೆ ಆತನ ಸಾಲದ ಮೊತ್ತದ ಶೇ.೨೫ರಷ್ಟು(ಗರಿಷ್ಠ೫೦ಸಾವಿರ) ವಾರಿಸುದಾರರಿಗೆ ಬ್ಯಾಂಕ್ ಭರಿಸುವ ಯೋಜನೆ ಸದಸ್ಯ ಕಲ್ಯಾಣ ನಿಧಿ ಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಎಸ್ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ,ಎಸ್.ಡಿ.ಸಿ.ಸಿ ಬ್ಯಾಂಕ್ ವಲಯ ಮೇಲ್ವಿಚಾರಕ ರಾಜಾರಾಮ್ ಶೆಟ್ಟಿ, ಉಪ್ಪೂರು ವ್ಯವಸಾಯಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ, ಕೋಟ ಸಹಕಾರಿ ವ್ಯವಸಾಯಕ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೋಭಾ ಶೆಟ್ಟಿ, ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ,ಸಾಸ್ತಾನ ಸಿ ಎ ಬ್ಯಾಂಕ್ ಅಧ್ಯಕ್ಷ ಶ್ರೀಧರ ಪಿ ಎಸ್,ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕರಾದ ಮಹೇಶ್ ಶೆಟ್ಟಿ, ರಾಜೇಶ್ ಉಪಾಧ್ಯ,ರಂಜಿತ್ ಕುಮಾರ್,ಗುಲಾಬಿ ಪಡುಕರೆ,ನಾಗರಾಜ್ ಹಂದೆ,ಪ್ರೇಮ ಪೂಜಾರಿ,ವಸಂತ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕ ಟಿ ಮಂಜುನಾಥ ಗಿಳಿಯಾರು ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು.ಕಾರ್ಯಕ್ರಮವನ್ನು ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಸಂಜೀವ ಗುಂಡ್ಮಿ ನಿರೂಪಿಸಿದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್  ಶೆಟ್ಟಿ  ವಂದಿಸಿದರು.ಗುಂಡ್ಮಿ ಶಾಖಾ ವ್ಯವಸ್ಥಾಪಕ ,ನಿರ್ದೇಶಕ ರವೀಂದ್ರ ಕಾಮತ್ ಸಹಕರಿಸಿದರು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close