Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಗಿಳಿಯಾರು ಯುವಕ ಮಂಡಲದಿoದ ನಾಮಫಲಕ karavalivani

ಕೋಟ: ಗಿಳಿಯಾರು ಯುವಕ ಮಂಡಲ ಗಿಳಿಯಾರು ಇದರ ಆಶ್ರಯದಲ್ಲಿ ಕೋಟ ಗ್ರಾಮ ಪಂಚಾಯತನ ಮೂಡುಗಿಳಿಯಾರು ಸಂಪರ್ಕಿಸುವ ರಸ್ತೆಗೆ ವಿವಿಧ ತಾಣಗಳು ಸಂದರ್ಶಿಸುವ ನಾಮಫಲಕವನ್ನು ನವಕರ್ನಾಟಕ ಬಿಲ್ಡರ್ಸ್ ಮಾಲಿಕ ಚೇತನ್ ಶೆಟ್ಟಿ  ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ,ಕೋಟ ಗ್ರಾಮಪಂಚಾಯತ್ ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಶೇಖರ್ ಜಿ,ಕೋಟ ಗ್ರಾಮಪಂಚಾಯತ್ ಸದಸ್ಯ ಯೋಗೇಂದ್ರ ಪೂಜಾರಿ,ಕೋಟ ಸಿ ಎ ಬ್ಯಾಂಕ್ ಮೂಡುಗಿಳಿಯಾರು ಶಾಖಾ ಪ್ರಭಂಧಕ ಗೋಪಾಲ್ ಜಿ,ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ ಆಚಾರ್ಯ,ಮಾಜಿ ಅಧ್ಯಕ್ಷ ಯೋಗಾನಂದ ಆರ್ ಹೆಗ್ಢ ,ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ್ ಗಿಳಿಯಾರ್,ಕಾರ್ಯದರ್ಶಿ ಅಕ್ಷಯಕುಮಾರ್ ಸೋಮಯಾಜಿ ಮತ್ತಿತರರು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close