Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಚಿತ್ರಪಾಡಿ- ಕರ್ಣಾಟಕ ಬ್ಯಾಂಕ್ ಕೊಡುಗೆಯ ನೂತನ ಸಭಾಭವನ ಲೋಕಾರ್ಪಣೆ ಪುಟಾಣಿಗಳಿಗೆ ನೀತಿಪಾಠಬೋದಿಸಿದ ಮಹಾಬಲೇಶ್ವರ ಎಂ.ಎಸ್-karavalivani

 


ಕೋಟ: ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಇಷ್ಟೊಂದು ಸಂಭ್ರಮಿಸುವ ಕಾರ್ಯಕ್ರಮ ನಾನು ಪ್ರಥಮ ಬಾರಿ ನೋಡುತ್ತಿದ್ದೇನೆ. ಇಲ್ಲಿನ ಅಧ್ಯಾಪಕ ವೃಂದ, ಶಾಲಾಭಿವೃದ್ದಿ ಸಮಿತಿ, ಪೋಷಕ ಮತ್ತು ವಿದ್ಯಾರ್ಥಿಗಳ ಸಮನ್ವಯತೆಯೇ ಇದಕ್ಕೆ ಕಾರಣವಾಗಿದೆ. (Karavalivani )ಕರ್ಣಾಟಕ ಬ್ಯಾಂಕ್ 19.28ಲಕ್ಷ ಕೊಡುಗೆಯ ಸಭಾಭವನವನ್ನು ಈ ಶಾಲೆಗೆ ನೀಡಿರುವುದು ಸಂತಸ ತಂದಿದೆ ಎಂದು ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ, ಸಿಇಓ ಮಹಾಬಲೇಶ್ವರ ಎಂ.ಎಸ್ ಹೇಳಿದರು. 

 ಅವರು ಸೋಮವಾರ ಸಾಲಿಗ್ರಾಮ ಚಿತ್ರಪಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ಕೊಡುಗೆಯಾಗಿ ನೀಡಿದ ನೂತನ ಸಭಾಂಗಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. 

 ವಿದ್ಯಾರ್ಥಿಗಳು ಕಲಿಕೆಯನ್ನು ಚೆನ್ನಾಗಿ ಮಾಡುವುದರ ಜತೆಗೆ ಎಲ್ಲಾ ಕ್ಷೇತ್ರದಲ್ಲೂ ರ್ಸ್ಪಸುವ ಹಾಗಿರಬೇಕು. ಜತೆಗೆ ವಿದ್ಯಾರ್ಥಿಗಳು ಕಷ್ಟಪಟ್ಟು ಓದಬಾರದು, ಇಷ್ಟಪಟ್ಟು ಓದಬೇಕು ಎಂದರು. 

ಸಭೆಯಲ್ಲಿ ಡಾ.ಡಿ.ವಿರೇಂದ್ರ ಹೆಗಡೆ ಗುಣಗಾನ

ವಿದ್ಯಾರ್ಥಿಗಳಲ್ಲಿ ಸಾಧನೆಯ ದಾರಿ ಕಾಣಬೇಕಾದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿಗಳ ಮೂಲಕ ನೋಡಬೇಕಾಗಿದೆ ಅವಿಭಜಿತ ಜಿಲ್ಲೆಗಳ ಸಾಧಕ ಹಾಗೂ ಪ್ರೇರಣಾಶಕ್ತಿಯಾಗಿ ರೂಪುಗೊಂಡಿದ್ದಾರೆ ಎಂದರಲ್ಲದೆ ಹೆಗಡೆ ರಾಜ್ಯಸಭೆ ಆಯ್ಕೆ ಮೂಲಕ ಇನ್ನಷ್ಟು ಸಮಾಜಮುಖಿಕಾರ್ಯಕ್ಕೆ ಇಂಬು ನೀಡಿದಂತ್ತೆ ಆಗಿದೆ ಎಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೀತಿಪಾಠ ಭೋಧಿಸಿದರು.

 ಸಮಾರಂಭದ ಅಧ್ಯಕ್ಷತೆಯನ್ನು ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ನೆನಪಿಗಾಗಿ ನಿರ್ಮಿಸಿದ ನೂತನ ತರಗತಿ ಕೊಠಡಿಯನ್ನು ದಿ.ಆಸ್ಕರ್ ಫೆರ್ನಾಂಡಿಸ್ ಅವರ ಮಾಜಿ ಆಪ್ತ ಕಾರ್ಯದರ್ಶಿ ಉದ್ಯಾವರ ನಾಗೇಶ್ ಉದ್ಘಾಟಿಸಿದರು. 

 ಮುಖ್ಯ ಅತಿಥಿಗಳಾಗಿ ಕೋಟ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ.ಕುಂದರ್, ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್ ಕಾರಂತ, ಮಾಜಿ ಅಧ್ಯಕ್ಷ ಅನಂತ ಪದ್ಮನಾಭ ಐತಾಳ್, ಇಂಜಿನಿಯರ್ ನಾಗರಾಜ ಸೋಮಯಾಜಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ ನಾಯ್ಕ್, ಉಡುಪಿ ಇಂದ್ರಾಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಮನೋಹರ ಶೆಟ್ಟಿ ತೋನ್ಸ್, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯರಾದ ರತ್ನಾನಾಗರಾಜ ಗಾಣಿಗ, ಶ್ರೀನಿವಾಸ ಅಮೀನ್, ಕಾರ್ಕಡ ಸಿಆರ್‌ಪಿ ಸವಿತಾ ಆಗಮಿಸಿ ಶುಭಹಾರೈಸಿದರು. 

 ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಂಕರ ದೇವಾಡಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಿ.ಜಗದೀಶ ಉಪಾಧ್ಯ, ಶಾಲಾ ವಾಹನ ಅಕ್ಷರರಥ ಸಮಿತಿಯ ಅಧ್ಯಕ್ಷ ನಾಗರಾಜ ಗಾಣಿಗ, ಶಾಲಾ ವಿದ್ಯಾರ್ಥಿ ನಾಯಕ ಕುಮಾರ್ ಶರಣ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಪಿ.ಜ್ಯೋತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. 

  ಕರ್ಣಾಟಕ ಬ್ಯಾಂಕ್ ಕೊಡುಗೆಯಾಗಿ ನೀಡಿದ ಸಭಾಭವನವನ್ನು ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ, ಸಿಇಓ ಮಹಾಬಲೇಶ್ವರ ಎಂ.ಎಸ್ ಉದ್ಘಾಟಿಸಿದರು.


 ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ, ಸಿಇಓ ಮಹಾಬಲೇಶ್ವರ ಎಂ.ಎಸ್ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close