Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ದಿ.ಪದ್ದು ಆಚಾರ್ ಸ್ಮರಣಾರ್ಥ ಬನ್ನಾಡಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ- karavalivani

 


ಕೋಟ: ದಿ.ಪದ್ದು ಆಚಾರ್ ಸ್ಮರಣಾರ್ಥ ಬನ್ನಾಡಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿಗಳು ಹಾಗೂ ವಡ್ಡರ್ಸೆ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಔಷದಿ ಕೊಡುಗೆ ಮತ್ತು ವಿಶೇಷ ಚೇತನರಿಗೆ ಸಹಾಯ ಧನ ವಿತರಣಾ ಕಾರ್ಯಕ್ರಮವು ಬನ್ನಾಡಿ ಪರಮಹಂಸ ಶಾಲೆಯಲ್ಲಿ ನಡೆಯಿತು. Karavalivani

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕ ಬಿ.ಅಜಿತ್ ಹೆಗ್ಡೆ ವಹಿಸಿದರು. ಕೋಟ-ಬ್ರಹ್ಮಾವರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಸುಧಾಕರ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. 

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‌ನ ಪಿಹೆಚ್‌ಎಫ್‌ಗಳಾದ ಚಂದ್ರಶೇಖರ ಮೆಂಡನ್,ಪ್ರಭಾಕರ್ ಕುಂಭಾಶಿ, ವಿಶ್ವಕರ್ಮ ಮಹಾಸಭಾದ ಉಡುಪಿ ಯುವ ಘಟಕದ ಅಧ್ಯಕ್ಷ ಕೋಟ ರಾಮಕೃಷ್ಣ ಆಚಾರ್, ಕೋಟ-ಬ್ರಹ್ಮಾವರ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ವಿಜಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಯ ಶಶಿಧರ ಶೆಟ್ಟಿ ಪ್ರಾಸ್ತಾವನೆ ಮಾಡಿದರು. ಸಹಾಯಧನವನ್ನು ರೋಟರಿ ಕ್ಲಬ್‌ನ ಪಿಹೆಚ್‌ಎಫ್ ಬಿ. ಸೀತಾರಾಮ ಆಚಾರ್ ಫಲಾನುಭವಿಗಳಿಗೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಕಲಾವತಿ ಹಾಗೂ ಸುಷ್ಮಾ ನಿರೂಪಿಸಿ ವಂದಿಸಿದರು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close