Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿವೇಕದ ವಿಶಿಷ್ಟ ಶ್ರೇಣಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಿರಂತರ ಅಧ್ಯಯನದ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈಯಲು ಸಾಧ್ಯ - ಪಿ. ಪ್ರಭಾಕರ ಮೈಯ್ಯ.-karavalivani

 


ಕೋಟ : ವಿವೇಕ ಪದವಿಪೂರ್ವ ಕಾಲೇಜಿನ 2021-22ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ವಿಜ್ಞಾನ ವಿಭಾಗದ 159 ವಿದ್ಯಾರ್ಥಿಗಳನ್ನು ಗುರುತಿಸಿ ಸಂಮ್ಮಾನಿಸಲಾಯಿತು karavalivani

ಕಾಲೇನ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಕೋಟ ವಿದ್ಯಾಸಂಘದ ಅಧ್ಯಕ್ಷ ಸಿ.ಎ. ಪಿ. ಪ್ರಭಾಕರ ಮೈಯ್ಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ‘ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಜೊತೆಗೆ ಜೀವನದಲ್ಲಿ ಧೈರ್ಯವಂತರಾಗಿ ಮುನ್ನುಗ್ಗಬೇಕು ಹಾಗೇ ದೃಢ ನಿರ್ಧಾರ, ಸಮಚಿತ್ತತೆ, ಹೊಸ ಹೊಸದಾಗಿ ವಿಚಾರಗಳನ್ನು ಆಲೋಚಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇಂತಹ ಗುಣಗಳನ್ನು ಬೆಳೆಸಿಕೊಂಡಲ್ಲಿ ನಮ್ಮ ಗುರಿಯನ್ನು ತಲುಪಲು ಸಾಧ್ಯ ಎಂದು ತಿಳಿಸಿದರು. 

ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. 

ಕೋಟ ವಿದ್ಯಾಸಂಘದ ಕಾರ್ಯದರ್ಶಿ ಎಂ. ರಾಮದೇವ ಐತಾಳ ಮತ್ತು ಕೋಶಾಧಿಕಾರಿ ವಲೇರಿಯನ್ ಮೆನೇಜಸ್ ಉಪಸ್ಥಿತರಿದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. 

ಮೊದಲಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ರಾಜ್ಯಮಟ್ಟದಲ್ಲಿ 6ನೇ ಸ್ಥಾನ ಗಳಿಸಿದ ಶ್ರೇಯಾ ಆಚಾರ್ ಹಾಗು 9ನೇ ಸ್ಥಾನ ಗಳಿಸಿದ ಶ್ರವಣ್, ಸಿಂಚನಾ, ಗ್ರೀಷ್ಮಾ ಹಾಗು 10ನೇ ಸ್ಥಾನ ಗಳಿಸಿದ ವೈಭವಿ ಶಾಸ್ತಿç ಇವರನ್ನು ವಿಶೇಷವಾಗಿ ಪುರಸ್ಕರಿಸಲಾಯಿತು. ಹಾಗೇಯೇ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಅವರ ಪೋಷಕರ ಸಮ್ಮುಖದಲ್ಲಿ ಒಂದೇ ವೇದಿಕೆಯಲ್ಲಿ ಪುರಸ್ಕರಿಸಲಾಯಿತು. 

ಫ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ. ಜಗದೀಶ ಹೊಳ್ಳ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿನಿಧಿ ಅಚ್ಯುತ ಉಪಾಧ್ಯ ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಿ. ರಮಾನಂದ ಭಟ್ ಉಪಸ್ಥಿತರಿದ್ದರು.ಸಾಧನೆಗೈದ ವಿದ್ಯಾರ್ಥಿಗಳ ಪಟ್ಟಿಯನ್ನು ಯಶವಂತಿ, ಶ್ರೀಕಾಂತ ಚಡಗ, ನಂದನಾ ಪೈ ವಾಚಿಸಿದರು.ಜೀವಶಾಸ್ತç ಉಪನ್ಯಾಸಕರಾದ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರ್ವಹಿಸಿ, ಮುಖ್ಯ ಸಹಶಿಕ್ಷಕರಾದ ವೆಂಕಟೇಶ ಉಡುಪ ಧನ್ಯವಾದ ಸಮರ್ಪಣೆಗೈದರು.ಈ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಉಪನ್ಯಾಸಕ ಸದಾಶಿವ ಹೊಳ್ಳ ಕಾರ್ಯಕ್ರಮ ನಿರ್ವಹಿಸಿ, ಚಂದ್ರಶೇಖರ್ ಎಚ್.ಎಸ್. ಧನ್ಯವಾದವನ್ನಿತ್ತರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close