ಕೋಟ ಗ್ರಾಮಪಂಚಾಯತ್‌ನ(Mahatma Gandhi) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ವಿಶೇಷ ಗ್ರಾಮಸಭೆ
ಕೋಟ: ಕೋಟ ಗ್ರಾಮಪಂಚಾಯತ್‌ನ (Mahatma Gandhi)ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2022-23 ನೇ ಸಾಲಿನ ಪ್ರಥಮ ಹಂತದ ಹಾಗೂ 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತ ವಿಶೇಷ ಗ್ರಾಮಸಭೆಯು ಕೋಟ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ತಾಲೂಕು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಓ ಕುಮಾರ್ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿ ಪಂಚಾಯತ್ ಅಭಿವೃದ್ಧಿಗೆ ನರೇಗಾ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಆ ಮೂಲಕ ಗ್ರಾಮದಲ್ಲಿ (job) ಉದ್ಯೋಗದ ಸೃಷ್ಠಿಸುವ ಕಾಯಕಲ್ಪ ,ಗ್ರಾಮದ ಮನೆ ಮನೆಗಳಲ್ಲಿ ಇಂಗು ಗುಂಡಿ ಸೇರಿದಂತೆ ವಿವಿಧ ತರಹದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಸಾಧ್ಯವಾಗುತ್ತದೆ.ಆಡಳಿತ ವ್ಯವಸ್ಥೆಯಲ್ಲಿ ಎಷ್ಟು ಪಾರದರ್ಶಕವಾಗಿರುತ್ತದೆ ಅಷ್ಟು ನಿರ್ಮಲ ಸ್ವಚ್ಛ ಆಡಳಿತ ಜನಸಾಮಾನ್ಯರಿಗೆ ನೀಡಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.
ತಾಂತ್ರಿಕ ಸಹಾಯಕ ಇಂಜಿನಿಯರ್ ಪವನ್ ಎಸ್ ನಾಯಕ್,ತಾಲೂಕು ಸಂಯೋಜಕ ಹುಸೇನಸಾಬ ದಾ ಕರನಾಚಿ ,ಪಂಚಾಯತ್ ಉಪಾಧ್ಯಕ್ಷೆ ಜಯಂತಿ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ನಿರೂಪಿಸಿದರು.


