Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಹಿರಿಯ ಗಾಂಧಿವಾದಿ ನರಸಿಂಹ ತುಂಗ ನಿಧನ today news karavalivani

 


ಕೋಟ: ಕೋಟತಟ್ಟು ನಿವಾಸಿ ಕೆ.ನರಸಿಂಹ ತುಂಗ(93ವ) ಶನಿವಾರ ಮುಂಜಾನೆ ವಯೋಸಹಜ ರೋಗದಿಂದ ನಿಧನರಾದರು.ಗಾಂಧಿವಾದಿಯಾಗಿ ಸ್ಥಳೀಯ(karavalivani) ನಿವಾಸಿಗಳಲ್ಲಿ ಸಾಕಷ್ಟು ಸಾಮಾಜಿಕ ನ್ಯಾಯಕ್ಕೆ ಒತ್ತುನೀಡುತ್ತಿದ್ದರು.ಹಿರಿಯ ಕೃಷಿಕರಾಗಿ ,ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತಾನು ತೋಡಗಿಸಿಕೊಂಡಿದ್ದರಲ್ಲದೆ ಸಾಹಿತಿ ಡಾ.ಕೋಟ ಶಿವರಾಮ ಕಾರಂತ ಹಾಗೂ ರಾಜಕಾರಣದಲ್ಲಿ ಮುಂಚೂಣಿಗೆ ನಿಂತ ತನ್ನೂರ ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಅಭಿಮಾನ ಇಟ್ಟುಕೊಂಡಿದ್ದರು.ಪತ್ನಿ ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

ಇಳಿವಯಸ್ಸಿನಲ್ಲೂ ಮತದಾನ ಜಾಗೃತಿ,ದೇಹದಾನ

ತನ್ನ ಇಳಿವಯಸ್ಸಿನಲ್ಲೂ ಅನಾರೋಗ್ಯದ ನಡುವೆಯೂ ಮತದಾನ ಕೇಂದ್ರದವರೆಗೆ ವೀಲ್ ಚೇರ್ ನಲ್ಲಿ ತೆರಳಿ ಮತದಾನದ ಜಾಗೃತಿ ಮೂಡಿಸುತ್ತಿದ್ದರು ಅಲ್ಲದೆ ತನ್ನ ನಿಧನದ ನಂತರ ದೇಹವನ್ನು ಕೆ.ಎಂ.ಸಿ ಗೆ 2010ರಲ್ಲೆ ರಿಜಿಸ್ಟçರ್ ಮಾಡಿಸಿಕೊಂಡಿದ್ದಾರೆ ಅದರಂತೆ ಮೃತದೇಹವನ್ನು ಕೆ.ಎಂ.ಸಿ ಗೆ ಸ್ಥಳಾಂತರಿಸಲಾಗಿದೆ.ಇವರ ನಿಧನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ಸೂಚಿಸಿದ್ದಾರೆ.ದೇಹದಾನ ಪ್ರಕ್ರಿಯೆಯಲ್ಲಿ ರೋಟರಿ ಕ್ಲಬ್ ಉಡುಪಿ ರಾಯಲ್‌ ಸಹಕಾರ ನೀಡಿತು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close