Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಅಭಿಮಾನಿ ಮನೆಗೆ ಭೇಟಿ ನೀಡಿದ ಶಾಸಕ ಹಾಲಾಡಿ-karavalivani

 


ಕೋಟ: ಇಲ್ಲಿನ ಕೋಟ ಕದ್ರಿಕಟ್ಟು ನಿವಾಸಿ ಶಂಕರ್ ಕುಂದರ್ ಭಾನುವಾರ ಹೃದಯಾಘಾತದಿಂದ ನಿಧನ ಹೊಂದಿದ ಸುದ್ದಿ ತಿಳಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೋಮವಾರ ತನ್ನ ಕಟ್ಟಾ ಅಭಿಮಾನಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಅವರ ಪುತ್ರ ಸಚಿನ್ ಕುಂದರ್ ಶಾಸಕರ ಬಳಿ ತಮ್ಮ ತಂದೆ ರಾಜಕಾರಣದಲ್ಲಿ ಸಕ್ರೀಯವಿಲ್ಲದಿದ್ದರೂ ಶಾಸಕ ಹಾಲಾಡಿಯವರ ಮೇಲಿನ ಅಭಿಮಾನ ಹಾಗೂ ಸ್ಪರ್ಧಿಸಿದ ದಿನಗಳಲ್ಲಿ ಮತಚಲಾವಣೆಗೆ ತನ್ನ ಕುಟುಂಬಿಕರನ್ನು ಜಾಗೃತಗೊಳಿಸುತ್ತಿದ್ದನ್ನು ಮೆಲುಕು ಹಾಕಿದರು.ತಂದೆ ಸಾವಿನ ವಿಷಯ ತಿಳಿದು ಭೇಟಿ ನೀಡಿದ ಶಾಸಕರಿಗೆ ಅಭಿಮಾನದ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪತ್ನಿ ಪುತ್ರಿ ,ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಸದಸ್ಯ ಚಂದ್ರ ಪೂಜಾರಿ ಕದ್ರಿಕಟ್ಟು ಮತ್ತಿತರರು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close