ಕೋಟೇಶ್ವರ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಗಳು -karavalivani
ಕೋಟ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಮತ್ತು ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ , ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ, ಇವರ ಸಂಯುಕ್ತ ಆಶ್ರಯದಲ್ಲಿ ಆ 10 ರಂದು ಕಾಲೇಜಿನಲ್ಲಿ ಮೂರು ರೀತಿಯ ಸಾಹಿತ್ಯಿಕ ಸ್ಪರ್ಧೆಗಳು ನಡೆಯಲಿವೆ.
ರಸಪ್ರಶ್ನೆ ಸ್ಪರ್ಧೆ, ಚರ್ಚಾಸ್ಪರ್ಧೆ, ಆಶುಭಾಷಣ ಸ್ಪರ್ಧೆಗಳು ನಡೆಯಲಿದ್ದು ಪದವಿ ಕಾಲೇಜು, ಸ್ವಾಯತ್ತ ಕಾಲೇಜುಗಳು ಮತ್ತು ವಿಶ್ವವಿದ್ಯಾ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.ವಿಜೇತ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಆಸಕ್ತ ವಿದ್ಯಾರ್ಥಿಗಳು ಗೂಗಲ್ ಫಾರಂ ಮೂಲಕ ಅಥವಾ ನೇರವಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಮತ್ತು ಹೆಚ್ಚಿನ ವಿವರಗಳಿಗಾಗಿ
9481179155 ಈ ದೂರವಾಣಿ ಸಂಖ್ಯೆ ಯನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ .
