Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಖಾದಿ ಕೈಮಗ್ಗ ತಯಾರಿಸುವ ಗುಂಡ್ಮಿ ಪದ್ಮಾವತಿ ಶೆಟ್ಟಿಗಾರ್ ಅವರಿಗೆ ಸನ್ಮಾನ- karavalivani


ಕೋಟ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ   ಖಾದಿ ಮಗ್ಗ  ದಿನಾಚರಣೆಯ ಪ್ರಯುಕ್ತ ಖಾದಿಯನ್ನು ಉಳಿಸಬೇಕು ಎನ್ನುವ ದೃಷ್ಟಿಯಲ್ಲಿ ಸತತ ೪೦ ವರ್ಷಗಳಿಂದ ಕರಾವಳಿ ಗಂಡು ಕಲೆಯಾದ ಯಕ್ಷಗಾನ ರಂಗಕ್ಕೆ ಇನ್ನಿತರ ಕ್ಷೇತ್ರಕ್ಕೆ  ಖಾದಿ ಕೈಮಗ್ಗವನ್ನು ತಯಾರಿಸುವ ಗುಂಡ್ಮಿ ಪದ್ಮಾವತಿ ಶೆಟ್ಟಿಗಾರ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಅಧ್ಯಕ್ಷೆ  ರೂಪ ಬಾಬು ಪೈ, ಪ್ರಧಾನ ಕಾರ್ಯದರ್ಶಿ ಸೌರಭಿ ಪೈ , ಮಂಡಲದ ಕಾರ್ಯದರ್ಶಿ ಆಶಾ ರಮೇಶ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಕುಂದಾಪುರ ಪುರಸಭಾ ನಾಮನಿರ್ದೇಶಿತ ಸದಸ್ಯ ಪುಷ್ಪ ಶೆಟ್, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ನೇತ್ರಾವತಿ, ಕಾರ್ಯದರ್ಶಿ ರೋಹಿಣಿ ಪೈ,, ಪುರಸಭಾ ಸದಸ್ಯೆ ವನಿತಾ ಎಸ್ ಬಿಲ್ಲವ, ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಅಧ್ಯಕ್ಷೆ ಸುಲತಾ ಹೆಗ್ಡೆ, ಪಟ್ಟಣ ಪಂಚಾಯತ್ ಸದಸ್ಯರಾದ ರಾಜು ಪೂಜಾರಿ, ನಾಮ ನಿರ್ದೇಶಿತ ಸದಸ್ಯರಾದ ದೇವೇಂದ್ರ ದೇವಾಡಿಗ, ವಸಂತ್ ಕಾಂಚನ್, ಕರುಣಾಕರ ಪೂಜಾರಿ,, ಪಾಂಡೇಶ್ವರ ಪಂಚಾಯತ್ ಮಾಜಿ ಸದಸ್ಯ ಶ್ರೀದೇವಿ ಹೊಳ್ಳ,  ಉಪಸ್ಥಿತರಿದ್ದರು.


ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ   ಖಾದಿ ಮಗ್ಗ  ದಿನಾಚರಣೆಯ ಪ್ರಯುಕ್ತ ಖಾದಿಯನ್ನು ಉಳಿಸಬೇಕು ಎನ್ನುವ ದೃಷ್ಟಿಯಲ್ಲಿ ಸತತ ೪೦ ವರ್ಷಗಳಿಂದ ಕರಾವಳಿ ಗಂಡು ಕಲೆಯಾದ ಯಕ್ಷಗಾನ ರಂಗಕ್ಕೆ ಇನ್ನಿತರ ಕ್ಷೇತ್ರಕ್ಕೆ  ಖಾದಿ ಕೈಮಗ್ಗವನ್ನು ತಯಾರಿಸಿ ನೀಡುತ್ತಾ ಬಂದಿರುವ  ಗುಂಡ್ಮಿ ಪದ್ಮಾವತಿ ಶೆಟ್ಟಿಗಾರ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಯಿತು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close