Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಡಿ- ಅತಿಸಾರ ಭೇದಿ ತಡೆಗಟ್ಟುವುದರ ಬಗ್ಗೆ ಮಾಹಿತಿ ಕಾಯಾಗಾರ- karavalivani



ಕೋಟ: ಕೋಡಿ ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯ ಉಪಕೇಂದ್ರ, ಕೋಡಿ ಕನ್ಯಾಣ ಇವರ ಸಂಯುಕ್ತ ಆಶ್ರಯದಲ್ಲಿ 

ಅತಿಸಾರ ಭೇದಿ ತಡೆಗಟ್ಟುವುದರ ಬಗ್ಗೆ ಮಾಹಿತಿ ಕಾರ್ಯಕ್ರಮ ಇತ್ತೀಚಿಗೆ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಇಲ್ಲಿ ಜರಗಿತು.

ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಭಾಕರ ಮೆಂಡನ್ ಅಧ್ಯಕ್ಷತೆಯನ್ನು ವಹಿಸಿ ಉದ್ಘಾಟಿಸಿದರು.(www.karavalivani.com)

ಸಭೆಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ರವೀಂದ್ರ ರಾವ್ ಕುಡಿಯುವ ನೀರಿನೊಂದಿಗೆ ಮಳೆ ನೀರು ಸೇರಿ ಅತಿಸಾರ 

ಭೇದಿಯಂತಹ ಕಾಯಿಲೆಗಳು ಬರುತ್ತದೆ ಹಾಗೂ ಅತಿಸಾರ ಭೇದಿ ಹಾಗೂ ಡೀ ಹೈಡ್ರೇಷನ್ ತಡೆಗಟ್ಟುವುದರ ಬಗ್ಗೆ ಯಾವ ರೀತಿ 

ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ತಿಳಿಸಿದರು. 

ಕಿರಿಯ ಆರೋಗ್ಯ ಸಹಾಯಕಿ ಅಮಿತಾ ಅತಿಸಾರ ಭೇದಿಯಿಂದ ಬಳಲುವವವರು ಓ.ಆರ್‌ಎಸ್ ಪಾನಕವನ್ನು ತಯಾರಿಸುವ ಬಗ್ಗೆ 

ಪ್ರಾತ್ಯಕ್ಷಿಕೆಯನ್ನು ಗ್ರಾಮಸ್ಥರಿಗೆ ತೋರಿಸಿಕೊಟ್ಟರು. ಸಮುದಾಯ ಆರೋಗ್ಯ ಅಧಿಕಾರಿ ಪರಸಪ್ಪ, ಗ್ರಾಮ ಪಂಚಾಯತ್ ಸದಸ್ಯೆ 

ಗೀತಾ ಖಾರ್ವಿ, ಆಶಾ ಕರ‍್ಯಕರ್ತೆಯವರಾದ ಗಾಯತ್ರಿ, ವಿನೋದಾ ,ಜ್ಯೋತಿ ಅಂಗನವಾಡಿ ಕಾರ್ಯಕರ್ತೆ ಮಲೀಲಾವತಿ ಹಾಗೂ 

ಗ್ರಾಮಸ್ಥರು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close