Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಾಳೆಕೊಪ್ಪಲು ಗ್ರಾಮದಲ್ಲಿ ಬೃಹತ್‌ ಮರ ಬಿದ್ದು ಬೈಕ್ ಸವಾರ ಸಾವು -karavalivani

 


Karavalivani news ಹಾಸನ, ಆಗಸ್ಟ್‌ 07: 

ಭಾರೀ ಗಾಳಿ, ಮಳೆಯಿಂದಾಗಿ ಬಾಗೂರು ರಸ್ತೆಯ 

ಮಾಳೆಕೊಪ್ಪಲು ಗ್ರಾಮದಲ್ಲಿ ಬೃಹತ್ ಗಾತ್ರದ 

ಮರವೊಂದು ಚನ್ನರಾಯಪಟ್ಟಣದಿಂದ ಬೈಕ್‌ನಲ್ಲಿ 

ತೆರಳುತ್ತಿದ್ದಾಗ ಕಲ್ಲೇಸೋಮನಹಳ್ಳಿ ಗ್ರಾಮದ 40 

ವರ್ಷದ ರಂಗಶೆಟ್ಟಿ ಮೇಲೆ ಬಿದ್ದಿದ್ದು, 

ಕಲ್ಲೇಸೋಮನಹಳ್ಳಿ ಗ್ರಾಮದ 40 ವರ್ಷದ 

ರಂಗಶೆಟ್ಟಿ ಎಂಬಾತ ಸ್ಥಳದಲ್ಲೇ ನರಳಾಡಿ 

ಸಾವನಪ್ಪಿದ್ದಾರೆ  ಮರದ ನಡುವೆ ಸಿಲುಕಿದ ರಂಗಶೆಟ್ಟಿ 

ಅರ್ಧಗಂಟೆಗೂ ಹೆಚ್ಚು ಹೊತ್ತು ನರಳಾಡಿ ತನ್ನನ್ನ 

ರಕ್ಷಿಸುವಂತೆ ಅಂಗಲಾಚಿದ್ದಾರೆ. ಕೂಡಲೇ ಸ್ಥಳೀಯರು 

ನೆರವಿಗೆ ಧಾವಿಸಿದ್ದು, ರಂಗಶೆಟ್ಟಿಯನ್ನು ರಕ್ಷಿಸಲು 

ಮಾತ್ರ ಸಾಧ್ಯವಾಗಿಲ್ಲ. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ 

ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಆತನನ್ನು 

ಜೀವಂತವಾಗಿ ಉಳಿಸಲು ಸಾಧ್ಯವಾಗಲಿಲ್ಲ. 

ಏಕೆಂದರೆ ಅಷ್ಟು ದೊಡ್ಡ ಮರವನ್ನು ತೆಗೆಯಲು 

ಸ್ಥಳೀಯರ ಕೈಯಿಂದ ಸಾಧ್ಯವಿರಲಿಲ್ಲ ರಂಗಶೆಟ್ಟಿ 

ನರಳಾಡುತ್ತಿದ್ದ, ದೃಶ್ಯ ಕಂಡು ಸ್ಥಳದಲ್ಲಿದ್ದವರು 

ಮರುಗಿದರು. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ 

ದಳದ ಸಿಬ್ಬಂದಿ 2 ಜೆಸಿಬಿ, ಹಿಟಾಚಿ ಯಂತ್ರ ಬಳಸಿ 

ರಂಗಶೆಟ್ಟಿ ಮೃತದೇಹವನ್ನು ಹೊರತೆಗೆದರು.

ನಂತರ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯ 

ಶವಾಗಾರಕ್ಕೆ ಮೃತದೇಹ ರವಾನಿಸಲಾಗಿದ್ದು, 

ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ 

ನಡೆಸಿದರು. ಮರದ ಕೆಳಗೆ ಸಿಲುಕಿ ಬೈಕ್ ಸವಾರ 

ಸಾವನ್ನಪ್ಪಲು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ 

ಕಾರಣ ಎಂದು ಸ್ಥಳೀಯರು ಕೆಲಕಾಲ ರಸ್ತೆ ತಡೆದು, 

ಮರ ತೆರವುಗೊಳಿಸಲು ಬಿಡದೆ ಪ್ರತಿಭಟನೆ 

ನಡೆಸಿದರು. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ 

ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಳೇ 

ಕಾಲದ ಮರವನ್ನು ತೆರವುಗೊಳಿಸುವಂತೆ ಕೆಲ 

ದಿನಗಳ ಹಿಂದೆ ಅರಣ್ಯ ಇಲಾಖೆಗೆ ಗ್ರಾಮ 

ಪಂಚಾಯಿತಿ ವತಿಯಿಂದ ಮನವಿ ಸಲ್ಲಿಸಿದ್ದರೂ 

ಕೂಡ ಇದುವರೆಗೂ ತೆರವುಗೊಳಿಸಿಲ್ಲ ಇಂದು 

ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು



ವಾಟ್ಸಾಪ್ ಟ್ರಿಕ್ಸ್..
You have to wait 15 seconds.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close