ಕಿರುತೆರೆ ನಟ ಮಂಡ್ಯ ರವಿಪ್ರಸಾದ್ ನಿಧನ(actor Mandya Raviprasad passed away)-karavalivani
@karavalivani, @ಕರಾವಳಿವಾಣಿ
ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಎಂ.ರವಿಪ್ರಸಾದ್(43) ಬುಧವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ
ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ (Magalu Janaki) ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ (Mandya Ravi) ನಿಧನರಾಗಿದ್ದಾರೆ. ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ರವಿ ಕಳೆದ ಒಂದು ತಿಂಗಳಿಂದ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ (Bengaluru) ಬಿಜೆಎಸ್ ನಲ್ಲಿ ದಾಖಲಾಗಿದ್ದ ನಟ ರವಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಟ ರವಿ ಮಗಳು ಜಾನಕಿ ಧಾರಾವಾಹಿ ಮೂಲಕ ಪ್ರಸಿದ್ಧಿ ಪಡೆದಿದ್ದರು. ಈ ಧಾರಾವಾಹಿಯಲ್ಲಿ ರವಿ ಚಂದುಭಾರ್ಗಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ತಂದೆ ತಾಯಿ ಇಬ್ಬರು ಸಹೋದರಿಯರು ಪತ್ನಿ ಪುತ್ರ ಸೇವಂತೆ ಅಪಾರ ಬಂಧು ಬಳಗ ಅಭಿಮಾನಿಗಳನ್ನು ಅಗಲಿರುವ ರವಿಪ್ರಸಾದ್ ಅವರ ಮೃತ ದೇಹದ ಅಂತ್ಯಸಂಸ್ಕಾರ ನಾಳೆ ಗುರುವಾರ ನಗರದ ಕಳ್ಳಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ

