Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕಾಂಗ್ರೆಸ್ ಮುಖಂಡ ದಿವಂಗತ ಆಸ್ಕರ್ ಫರ್ನಾಂಡಿಸ್‌ರವರ ಪ್ರಥಮ ಪುಣ್ಯ ತಿಥಿ ನುಡಿನಮನ-Karavalivani


@karavalivani, @ಕರಾವಳಿವಾಣಿ

ಕೋಟ: ಕೋಟ ಬ್ಲಾಕ್ ಕಾಂಗ್ರೆಸ್(Block Congress) ಪಕ್ಷದ ವತಿಯಿಂದ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಭವನ ಕಾಂಗ್ರೆಸ್ ರಾಷ್ಟ್ರೀಯ ನಾಯಕ ದಿವಂಗತ ಆಸ್ಕರ್ ಫರ್ನಾಂಡಿಸ್‌ರವರ ಪ್ರಥಮ ಪುಣ್ಯ ತಿಥಿ ಸ್ಮರಣಾರ್ಥ, ಪುಷ್ಪ ನಮನ ಮತ್ತು ನುಡಿ ನಮನ ಕಾರ್ಯಕ್ರಮ ಜರುಗಿತು.
ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ರವರು ಅಸ್ಕರ್ ಫೆರ್ನಾಂಡಿಸ್ ರವರಿಗೆ ನುಡಿನಮನ ಸಲ್ಲಿಸಿದರು. ಆಸ್ಕರ್ ಫೆರ್ನಾಂಡಿಸ್ ರವರು ಲೋಕಸಭಾ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ,ಕೇಂದ್ರದ ಸಚಿವರಾಗಿ ಮತ್ತು ನಾಲ್ವರು ಪ್ರಧಾನಮಂತ್ರಿಗಳೊoದಿಗೆ ಕೆಲಸ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ವಿಶೇಷವಾಗಿ ಗಾಂಧಿ ಕುಟುಂಬದೊoದಿಗೆ ನಿಕಟ ಸಂಬoಧ ಹೊಂದಿದ್ದು, ಇವರ ಅಧಿಕಾರ ಅವಧಿಯಲ್ಲಿ ದೇಶಕ್ಕೆ ನೀಡಿದ ಹಲವಾರು ಕೊಡುಗೆಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರಸ್ ಮುಖಂಡರುಗಳಾದ ರಾಜು ಪೂಜಾರಿ, ಬಸವ ಪೂಜಾರಿ ಗುಂಡ್ಮಿ, ಬಾಲಕೃಷ್ಣ ಪೂಜಾರಿ ಸಾಸ್ತಾನ,ಅನಂತ ಸುಂದರ್ ಶೆಣೈ ಕೋಟ, ದಿನೇಶ್ ಬಂಗೇರ, ಗುಂಡ್ಮಿ, ಶ್ರೀನಿವಾಸ ಶೆಟ್ಟಿಗಾರ್, ರಾಜು ಪೂಜಾರಿ ಹಾಡಿಮನೆ, ಜೊನ್ಸನ್ ಹಂಗಾರಕಟ್ಟೆ, ಸೂರ್ಯಕಾಂತ ಶೆಟ್ಟಿ, ವಿಶ್ವನಾಥ್ ಕೋಟ, ಮಂಜನಾಥ ಪೊಜಾರಿ ಗೋಳಿ ಬೆಟ್ಟು, ರಮೇಶ್ ಆಚಾರ್ ಪಾಂಡೇಶ್ವರ ಸಾಸ್ತಾನ ಉಪಸ್ಥಿತರಿದ್ದರು. ಸಾಲಿಗ್ರಾಮ ಸ್ಥಾನೀಯ ಸಮಿತಿ ಕಾರ್ಯದರ್ಶಿ ರವೀಂದ್ರಕಾಮತ್ ಕಾರ್ಯಕ್ರಮ ನಿರೂಪಿಸಿದರು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close