Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕುಂದಾಪುರ ಪೊಲೀಸ್ ಠಾಣೆ ವತಿಯಿಂದ ಕುಂದಾಪುರ ತಾಲ್ಲೂಕಿನ ವಕ್ವಾಡಿಯ ಗ್ರಾಮಸ್ಥರಿಗಾಗಿ ಜನ ಸ೦ಪಕ೯ ಸಭೆ -Karavalivani

 ಈ ಸುದ್ದಿ ಓದಲು ಕ್ಲಿಕ್ ಮಾಡಿ



@karavalivani, @ಕರಾವಳಿವಾಣಿ
ಕುಂದಾಪುರ ಪೊಲೀಸ್ ಠಾಣೆ ವತಿಯಿಂದ ಕುಂದಾಪುರ ತಾಲ್ಲೂಕಿನ ವಕ್ವಾಡಿಯ ಗ್ರಾಮಸ್ಥರಿಗಾಗಿ ಜನ ಸ೦ಪಕ೯ ಸಭೆ ಕುಂದಾಪುರ ಠಾಣಾಧಿಕಾರಿ ಸದಾಶಿವ್ ಗೌರೋಜಿ ನೆರವೇರಿಸಿದರು.

ಸಭೆಯಲ್ಲಿ ಮಾತನಾಡಿದ ಅವರು "ಸುತ್ತಮುತ್ತಲು ನಡೆಯುತ್ತಿರುವ ಅಪರಾಧದ ವಿಚಾರಗಳ ಬಗ್ಗೆ ಸಾರ್ವಜನಿಕರು ಯಾವುದೇ ಭಯ ಪಡದೆ ಠಾಣೆಗೆ ತಿಳಿಸಿ ದಲ್ಲಿ ಅವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಅವಘಡಗಳು ಅಪರಾಧಗಳು ನಡೆದ ಸಂದರ್ಭದಲ್ಲಿ  112 ಕರೆ ಮಾಡಿದಲ್ಲಿ ಕ್ಲಪ್ತ ಸಮಯಕ್ಕೆ ಇಲಾಖೆ ಹಾಜರಿದ್ದು ಸೇವೆಗೆ ಸಿದ್ಧವಿರುತ್ತದೆ ಎಂಬುದಾಗಿ ತಿಳಿಸಿದರು. ಪ್ರತಿ ಗ್ರಾಮಗಳಲ್ಲಿಯೂ  ಮಪ್ತಿಯಲ್ಲಿ ಹಾಗೂ ಬೀಟ್ ಪೊಲೀಸ್



 ಸಂಚರಿಸುತ್ತಿದ್ದು ಅಪರಾಧದ ನಿಯಂತ್ರಣಕ್ಕಾಗಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂಬುದಾಗಿ ಮನವಿಯನ್ನು ಮಾಡಿದರು". ಗಾಂಜಾ ಸೇವನೆಯ ಕುರಿತಾಗಿ  ಮಾಹಿತಿ ಇದ್ದಲ್ಲಿ ಅದನ್ನು ದಯವಿಟ್ಟು ಸ್ಥಳೀಯ ಠಾಣೆಗಳಿಗೆ ತಿಳಿಸತಕ್ಕದ್ದು ಎಂದವರು ತಿಳಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಮುಕ್ತ ಮಾತುಕತೆ ನಡೆಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸ್ಥಳೀಯರಾದ ಗಿರೀಶ್ ಐತಾಳ್ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಪೂಜಾರಿ , ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ,ಕೋಟಿ ನಾರಯಣ, ಪೋಲಿಸ್ ಸಿಬ್ಬಂದಿ ಗಣೇಶ್ ಸಾಲಿಕೇರಿ  ಉಪಸ್ಥಿತರಿದ್ದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close