Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಕೂಟ -karavalivani


@karavalivani, @ಕರಾವಳಿವಾಣಿ 


ಕೋಟ: ದೈಹಿಕ ಕ್ಷಮತೆ ಕ್ರೀಡೆಗೆ ಸಹಕಾರಿ ತನ್ಮೂಲಕ ಕ್ರೀಡೆಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕೋಟೇಶ್ವರ ಪದವಿ  ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸೀತಾರಾಮ ಮಧ್ಯಸ್ಥ ಹೇಳಿದರು.
ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ನಡೆದ ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಕೂಟವನ್ನು ಉದ್ಘಾಟಿಸಿ ಮಾತನಾಡಿ ಬಡತನ ಕ್ರೀಡೆಗೆ ಅಡ್ಡಿಯಾಗದು ಇಂದು ಬಡತನದ ಮೂಲಕ ಮೀರಾಚಾನು,ಗುರುರಾಜ್ ಪೂಜಾರಿ ವಿಶ್ವಮಟ್ಟದಲ್ಲಿ  ಗುರುತಿಸಿಕೊಂಡಿದ್ದಾರೆ.ಅವರೇ ಇಂದಿನ ಯುವ ಕ್ರೀಡಾಳುಗಳಿಗೆ

ಆದರ್ಶವಾಗಬೇಕು,ಮಕ್ಕಳನ್ನು ಕ್ರೀಡೆಗೆ ಪ್ರೋತ್ಸಾಹಿಸುವ ಕಾರ್ಯ ಪೋಷಕರು ಮಾಡಬೇಕಿದೆ ಆ ಮೂಲಕ ವಿಶ್ವಕ್ಕೆ ಭಾರತವನ್ನು ಪರಿಚಯಿಸುವ ಕಾರ್ಯ ಇಂಥಹ ಕಾಲೇಜುಗಳ ಮೂಲಕ ನಡೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಕೋಶಾಧಿಕಾರಿ ವಲೇರಿಯನ್ ಮೇನೆಜಸ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ,ವಿವೇಕ ಆಂಗ್ಲ ಮಾಧ್ಯಮ ವಿಭಾಗ ಮುಖ್ಯ ಶಿಕ್ಷಕ ಭಾಸ್ಕರ್ ಆಚಾರ್ಯ, ವಿವೇಕ ಬಾಲಕೀಯರ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಗದೀಶ್ ಹೊಳ್ಳ,ಬಾಲಕರ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ,ಶಾಲಾ ಹಳೇ ವಿದ್ಯಾರ್ಥಿ ಸಂಘದ ಮಂಜುನಾಥ ಉಪಾಧ್ಯ,ತೀರ್ಪುಗಾರರಾಗಿ ದೈಹಿಕ ಶಿಕ್ಷಕರು,ಇತರರು ಉಪಸ್ಥಿತರಿದ್ದರು.  ಕಾರ್ಯಕ್ರಮವನ್ನು ಶಿಕ್ಷಕ ಶಿವಪ್ರಸಾದ್ ಶೆಟ್ಟಿಗಾರ್ ನಿರೂಪಿಸಿದರು.ದೈಹಿಕ ಶಿಕ್ಷಕ ವಸಂತ್ ಶೆಟ್ಟಿ ವಂದಿಸಿದರು
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close