ಹೊಸ ಆಯುಷ್ಮಾನ್ ಮತ್ತು ಅಭಾ ಗುರುತಿನ ಚೀಟಿ ,ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಅಭಿಯಾನ-karavalivani
@karavalivani, @ಕರಾವಳಿವಾಣಿ
ಕೋಟ: ಕೋಟ ಗ್ರಾಮಪಂಚಾಯತ್ ಹಾಗೂ ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಏಜುಕೇರ್ ಗ್ರಾಮ ಒನ್ ಸೇವಾ ಕೇಂದ್ರ ಕೋಟ ಇವರ ಸಹಯೋಗದೊಂದಿಗೆ ಹೊಸ ಆಯುಷ್ಮಾನ್ ಅಭಾ ಜಂಟಿ ಗುರುತಿನ ಚೀಟಿ,ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಉಚಿತ ಸೇವಾ ಅಭಿಯಾನ ಕಾರ್ಯಕ್ರಮ ಇದೇ ಬರುವ ಸೆ.11ರಂದು ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ಸಮಾಜ ಕಲ್ಯಾಣ ಹಿಂದುಳಿದ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಳ್ಳಲಿದ್ದು,ಅಧ್ಯಕ್ಷತೆಯನ್ನು ಕೋಟ ಗ್ರಾ.ಪಂ ಅಧ್ಯಕ್ಷ ಅಜಿತ್ ದೇವಾಡಿಗ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕೋಟ ಅಮೃತೇಶ್ವರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ ಕುಂದರ್, ಮನೋವೈದ್ಯ ಡಾ.ಪ್ರಕಾಶ್ ತೋಳಾರ್,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ,ಕೋಟ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಮೃತ್ ಜೋಗಿ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್ ,ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.
.jpg)
