Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ( encouragement) (ನೀಡಬೇಕು- ಡಾ.ಕೆ.ಎಸ್ ಕಾರಂತ್-karavalivaninews


@karavalivani, @ಕರಾವಳಿವಾಣಿ

ಕೋಟ: ಮಕ್ಕಳಲ್ಲಿರುವ ಪ್ರತಿಭೆ (talent) ಹೊರತರಲು ಪೋಷಕರ ಪಾತ್ರ ಮಹತ್ವವಾದದ್ದು ಈ ಮೂಲಕ ಹೊಸ ಹೊಸ ಪ್ರತಿಭೆಗಳು ಹೊರಚುಮ್ಮಲು ಅನುವುಮಾಡಿಕೊಡಬೇಕು ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಎಸ್ ಕಾರಂತ ಹೇಳಿದರು.
ಚಿತ್ರಪಾಡಿ (Senior Govt )ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೆತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೆತ್ರ ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಕಾರ್ಕಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2022-23 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಭಾ ಕಾರಂಜಿಯ ಮೂಲಕ ಮಕ್ಕಳ ಜೀವನುತ್ಸಾಹವನ್ನು ಅನಾವರಣ ಮಾಡುವ ಪ್ರಕ್ರೀಯೆ ಶಿಕ್ಷಣ ಸಂಸ್ಥೆಗಳ ಮೂಲಕ ಮಾಡುವುದು ಬಹಳ ಶ್ಲಾಘನೀಯ, ಮಕ್ಕಳು ಕೇವಲ ಅಂಕವನ್ನು ಗಳಿಸುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೋಡಗಿಕೊಳ್ಳಬೇಕು. ಪೋಷಕರು ಕೇವಲ ಮಕ್ಕಳಿಗೆ ಅತಿ ಹೆಚ್ಚು ಒತ್ತಡವನ್ನು ನೀಡುವುದು ಕಡಿಮೆ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯಲು ಅನುವುಮಾಡಿಕೊಡಬೇಕು ಎಂದು ಕರೆಇತ್ತರು


ಮುಖ್ಯ ಅತಿಥಿಯಾಗಿ ಕುಂದಾಪುರ ಭಂಡಾರ್ಸಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಾಘವೆಂದ್ರ ಭಟ್ ,ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಶಂಕರ ದೇವಾಡಿಗ,ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯೆ ರತ್ನ ನಾಗರಾಜ ಗಾಣಿಗ ,ಆಂಜನೇಯ ಸೇವಾ ಟ್ರಸ್ಟ್ನ ಟ್ರಸ್ಟಿಯಾದ ನರಸಿಂಹ ಶ್ಯಾನುಭಾಗ್ ,ಹಳೆ ವಿದ್ಯಾರ್ಥಿ ಅರುಣ್ ಕುಂದರ್,ಬ್ರಹ್ಮಾವರ ಕ್ಷೆತ್ರ ಶಿಕ್ಷಣಾಧಿಕಾರಿ ರಂಗನಾಥ, ಶಿಕ್ಷಣ ಇಲಾಖೆ ಸಂಯೋಜಕ ಪ್ರಕಾಶ್.ಬಿ.ಬಿ, ಮಂದಾರ್ತಿ ಹೋಬಳಿ ನೋಡೆಲ್ ಅಧಿಕಾರಿ ರಾಘವ ಶೆಟ್ಟಿ,ಬಿಆರ್‌ಪಿ ನೋಡೆಲ್ ಅಧಿಕಾರಿ ಕೆ.ಎಸ್ ಮಂಜುನಾಥ,ಅಕ್ಷರರಥದ ಅಧ್ಯಕ್ಷ ನಾಗರಾಜ ಗಾಣಿಗ,ಹಳೆ ವಿದ್ಯಾರ್ತಿ ಸಂಘದ ಅಧ್ಯಕ್ಷರಾದ ಜಗದೀಶ ಉಪಾಧ್ಯಾಯ,ಸಿಆರ್‌ಪಿ ಸವಿತಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಸ್ವಾಗತಿಸಿದರು.ಕಾರ್ಯಕ್ರಮವನ್ನು ಶಾಲಾ ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ನಿರೂಪಿಸಿದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close