Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ನಿಸ್ವಾರ್ಥ ಸಮಾಜ ಸೇವಕ ರವಿ ಕಟಪಾಡಿ( Ravi Katpadi)ಅವರಿಗೆ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರ-karavalivaninews


@karavalivani, @ಕರಾವಳಿವಾಣಿ

 ಜಾಹೀರಾತಿಗಾಗಿ ಸಂಪರ್ಕಿಸಿ-9483578321

ಕೋಟ : ಶ್ರೀವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ-ಯಡ್ತಾಡಿ ಅವರು ಕೊಡಮಾಡುವ 2022ನೇ ಸಾಲಿನ ಶ್ರೀ ವಿನಾಯಕ ಸಾಧನ ಶ್ರೀ ಪುರಸ್ಕಾರವನ್ನು ಕೃಷ್ಣ ಜನ್ಮಾಷ್ಟಮಿಯಂದು ವೈವಿಧ್ಯಮಯ ವೇಷ ತೊಟ್ಟು ಸಂಗ್ರಹವಾದ ಹಣದಿಂದ ಅನಾರೋಗ್ಯ ಪೀಡಿತ ಮಕ್ಕಳ ವೈದ್ಯಕೀಯ ನೆರವು ನೀಡುವುದರ ಜೊತೆಗೆ ಹಲವಾರು ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ

ನಿಸ್ವಾರ್ಥ ಸಮಾಜ ಸೇವಕ  ರವಿ ಕಟಪಾಡಿ (
Ravi Katpadi)ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರದ ಬಗ್ಗೆ ಮಾತನಾಡಿದ ಯುವಕ ಮಂಡಲದ ಅಧ್ಯಕ್ಷ  ರಾಜೇಶ್ ದೇವಾಡಿಗ ನಿಸ್ವಾರ್ಥ ಸೇವೆಯ ಮೂಲಕ ಅಶಕ್ತರ ಬಾಳಿಗೆ ಹೊಸ ಬದುಕು ನೀಡುತ್ತಿರುವ  ರವಿ ಕಟಪಾಡಿ ಅವರು ಯುವ ಜನಾಂಗಕ್ಕೆ ಪ್ರೇರಣೆಯಾಗಿದ್ದಾರೆ.
ಅವರ ಈ ಸೇವೆಯನ್ನು ಗುರುತಿಸಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದರು.

ಅಕ್ಟೋಬರ್ 2 ರಂದು ಸಾೖಬ್ರಕಟ್ಟೆಯ ಮಹಾತ್ಮ ಗಾಂಧಿ ಫ್ರೌಡಶಾಲೆಯಲ್ಲಿ ನಡೆಯುವ 11 ನೇ ವರ್ಷದ ಶ್ರೀ ಶಾರದ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದೆಂದು ಯುವಕ ಮಂಡಲದ ಕಾರ್ಯದರ್ಶಿ ಪ್ರಭಾಕರ್ ಪೂಜಾರಿ ಅವರು ತಿಳಿಸಿದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close