Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್, webnewskannada

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್, webnewskannada


karavalivani news

 Webnews kannada


Updated on: Sep 19, 2023 | 

ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್, 

ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆ ಸಿಕ್ಕಿದ್ದಿದ್ದಾನೆ. ಒಡಿಶಾ ಪೊಲೀಸರ ಸಹಾಯದಿಂದ ಸಿಸಿಬಿ ಪೊಲೀಸರು ಹಾಲಶ್ರೀಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ.

ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆ ಸಿಕ್ಕಿದ್ದಿದ್ದಾನೆ. ಒಡಿಶಾ ಪೊಲೀಸರ ಸಹಾಯದಿಂದ ಸಿಸಿಬಿ ಪೊಲೀಸರು ಹಾಲಶ್ರೀಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ. 

ಬೆಂಗಳೂರು, (ಸೆಪ್ಟೆಂಬರ್ 19): ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ (Abhinava Halashree) ಕೊನೆಗೆ ಸಿಕ್ಕಿದ್ದಿದ್ದಾನೆ. ಕಳೆದ ಚೈತ್ರಾ ಕುಂದಾಪುರ (Chaitra Kundapura)) ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ 

ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು (ಸೆಪ್ಟೆಂಬರ್ 19) ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ.

ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸ್ತೀನಿ ಎಂದು ಚೈತ್ರಾ ಕುಂದಾಪುರ, ಗೋವಿಂದ್‌ ಬಾಬು ಎನ್ನುವರಿಗೆ 5 ಕೋಟಿ ನಾಮ ಹಾಕಿದ್ದಳು. ಇದೇ ವಂಚನೆ ಕೇಸ್​ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರ ಮಾಧ್ಯಮಗಳ ಮುಂದೆ ಸ್ವಾಮೀಜಿ ಅರೆಸ್ಟ್ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಎಂದು ಹೊಸ ಟ್ವಿಸ್ಟ್‌ ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿ MLA ಟಿಕೆಟ್ ಡೀಲಿಂಗ್ ಹಿಂದೆ ಇರೋ ಆ ದೊಡ್ಡವರು ಯಾರು ಎನ್ನುವ ಕುತೂಹಲ ಮನೆ ಮಾಡಿತ್ತು.

ಇದೇ ಪ್ರಕರಣದಲ್ಲಿ ಎ3 ಆಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಅಜ್ಞಾತ ಸ್ಥಳ ಸೇರಿದ್ದಾರೆ. ಹಾಲು ಮಠಕ್ಕೂ ಬಾರದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ದೂರುದಾರ ಗೋವಿಂದ್ ಪೂಜಾರಿಯಿಂದ ಒಂದೂವರೆ ಕೋಟಿ ಪಡೆದಿದ್ದ ಸ್ವಾಮೀಜಿ ಇದೀಗ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದು, ದೊಡ್ಡವರ ಹೆಸರು ಬಾಯಿಬಿಡುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಸ್ವಾಮೀಜಿಯ ಬಂಧನ ಭಾರೀ ಕುತೂಹಲ ಮೂಡಿಸಿದೆ.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close