Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ರೈಲು ಅಪಘಾತ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಪೋರ-webnewskannada


WEB NEWS KANNADA

ರೈಲು ಅಪಘಾತ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಪೋರ-webnewskannada

Posted On: WebNews Kannada

webnewskanada-ಬಾಲಕನ ಸಮಯಪ್ರಜ್ಞೆಯಿಂದ ಬಹುದೊಡ್ಡ ರೈಲು ಅಪಘಾತ ತಪ್ಪಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆ ಇದು. ಮುರ್ಸಲೀನ್ ಶೇಖ್ ಎಂಬ 12 ವರ್ಷದ ಬಾಲಕ ಹೊಲದಲ್ಲಿ ಕೆಲಸ ಮಾಡುವ ಕಾರ್ಮಿಕನ ಮಗ. ಅಂದು ತಂದೆಯೊಂದಿಗೆ ಹೊಲಕ್ಕೆ ಬಂದಿದ್ದ ಮುರ್ಸಲಿನ್ ರೈಲ್ವೆ ಹಳಿಯ ಒಂದು ಭಾಗವು ಹಾನಿಗೊಳಗಾಗಿರುವುದನ್ನು ಗಮನಿಸಿದ್ದಾನೆ. ಇನ್ನೇನು ರೈಲು ಬಂದೇ ಬಿಡುತ್ತದೆ
 
ಏನು ಮಾಡುವುದು ಎಂದು ಆಲೋಚಿಸಿ ತಕ್ಷಣ ತಾನು ಧರಿಸಿರುವ ಕೆಂಪು ಟಿ ಶರ್ಟ್​ ತೆಗೆದು ರೈಲು ಬರುತ್ತಿದ್ದ ಕಡೆಗೆ ಬೀಸುತ್ತಾನೆ. ರೈಲಿನ ಲೊಕೊಮೊಟಿವ್ ಪೈಲಟ್ ಸಿಗ್ನಲ್ ಗುರುತಿಸಿ ತುರ್ತು ಬ್ರೇಕ್ ಹಾಕಿದ್ದರಿಂದ ಅಪಘಾತ ತಪ್ಪಿತ್ತು. ಕಳೆದ ಒಂದು ವಾರದಿಂದ ಆ ಭಾಗದಲ್ಲಿ ಭಾರಿ ಮಳೆಯಾಗಿತ್ತು, ಇದರಿಂದಾಗಿ ರೈಲು ಹಳಿ ಹಾಳಾಗಿತ್ತು, ಬಾಲಕನ ಸಮಯಪ್ರಜ್ಞೆಯಿಂದ ಅಪಘಾತ ತಪ್ಪಿದೆ, 
ಜತೆಗೆಜನರ ಜೀವವೂ ಉಳಿದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಮಳೆಯಿಂದಾಗಿ ಹಳಿಗಳು ಹಾಳಾಗಿದ್ದವು, ಸಮಯಕ್ಕೆ ಸರಿಯಾಗಿ ಬಾಲಕ ಅತ್ತ ಹೋಗಿದ್ದ, ಆತ ಏನು ಮಾಡಬೇಕು ಎಂದು ಆಲೋಚಿಸುವುದು ಸ್ವಲ್ಪ ತಡವಾಗಿದ್ದರೂ ದೊಡ್ಡ ಅಪಘಾತ ನಡೆದುಹೋಗುತ್ತಿತ್ತು ರೈಲ್ವೆ ಅಧಿಕಾರಿಗಳು ಬಾಲಕನಿಗೆ ಶೌರ್ಯ ಪ್ರಮಾಣಪತ್ರವನ್ನು ನೀಡಿ ಗೌರವಿಸಿದರು ಮತ್ತು ನಗದು ಬಹುಮಾನವನ್ನು ಸಹ ನೀಡಿದರು. ಸ್ಥಳೀಯ ಸಂಸದರು .ಮತ್ತು ವಿಭಾಗೀಯ ರೈಲು ವ್ಯವಸ್ಥಾಪಕರು ಬಾಲಕನ ಮನೆಗೆ ಭೇಟಿ ನೀಡಿ ಅಭಿನಂದಿಸಿದರು. ಏತನ್ಮಧ್ಯೆ, ಹಳಿಗಳ ಹಾನಿಗೊಳಗಾದ ಭಾಗವನ್ನು ಸರಿಪಡಿಸಿ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ADSENSE CODE - 1

ADSENSE CODE - 1





<

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close