Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ನಿರೀಕ್ಷೆಗೂ ಮೀರಿದ ಫೀಚರ್ ಬರುತ್ತಿದೆ whatsapp ವಾಟ್ಸ್​ಆ್ಯಪ್​ನಲ್ಲಿ karavalivani news

WhatsApp testing chat filters feature: ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿದೆ. ಹೀಗಿರುವಾಗ ಇಂದು ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ.


ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಪ್ರತಿದಿನ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಮೊನ್ನೆಯಷ್ಟೆ ಭಾರತದಲ್ಲಿ ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿದಂತಹ 72 ಲಕ್ಷಕ್ಕೂ ಅಧಿಕ ಖಾತೆಯನ್ನು ನಿಷೇಧಿಸಿ ಸುದ್ದಿಯಾಗಿತ್ತು. ಇದರ ನಡುವೆ ಹೊಸ ಹೊಸ ಫೀಚರ್​ಗಳನ್ನು ಕೂಡ ಘೋಷಣೆ ಮಾಡುತ್ತಿದೆ
.ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿದೆ. ಹೀಗಿರುವಾಗ ಇಂದು ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ.ವಾಟ್ಸ್​ಆ್ಯಪ್ ಅಪ್‌ಡೇಟ್‌ಗಳ

ಟ್ರ್ಯಾಕರ್, WabetaInfo ನ ವರದಿಯ ಪ್ರಕಾರ, ಮೆಟಾ-ಮಾಲೀಕತ್ವದ ಇನ್‌ಸ್ಟಂಟ್ ಮೆಸೇಜಿಂಗ್
ಅಪ್ಲಿಕೇಶನ್ ಬಳಕೆದಾರರಿಗೆ ಚಾಟ್ ಪಟ್ಟಿಯನ್ನು ಫಿಲ್ಟರ್ ಎಂಬ ಹೊಸ ವೈಶಿಷ್ಟ್ಯವನ್ನು ನೀಡಲು ಮುಂದಾಗಿದೆ. ಸದ್ಯ ಈ ಫೀಚರ್ ಅಭಿವೃದ್ದಿ ಹಂತದಲ್ಲಿದೆ ಎಂದು ಹೇಳಿದೆ.
ವಾಟ್ಸ್​ಆ್ಯಪ್ ಬೀಟಾ 2.23.14.17 ಅಪ್ಡೇಟ್​ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.ಮಾಹಿತಿಯ ಪ್ರಕಾರ, ಫಿಲ್ಟರ್​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ಆ್ಯಪ್​ ಮೇಲ್ಬಾಗದ ಬಲ
 
 

ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.
ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್​ಗಳಿಗೆ ಇದು ಅನ್ವಯ ಆಗುವುದಿಲ್ಲ. ಇದಕ್ಕಾಗಿ ಯಾವುದೇ ಆಯ್ಕೆ ಕಂಡುಬಂದಿಲ್ಲ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close