Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Praveen Nettar: ಹತ್ಯೆ ಆರೋಪಿಗಳಿಗೆ ಜಾಮೀನು ನಿರಾಕರಣೆ webnewskannada

Praveen Nettar: ಹತ್ಯೆ ಆರೋಪಿಗಳಿಗೆ ಜಾಮೀನು ನಿರಾಕರಣೆ

 

Posted On: WebNews Kannada

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ (Praveen Nettar Case) ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು (Bail Rejected) ನಿರಾಕರಿಸಿದೆ. ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಇಸ್ಮಾಯಿಲ್ ಶಫಿ. ಮೊಹಮ್ಮದ್ ಇಕ್ಬಾಲ್ ಮತ್ತು ಎಂ ಶಾಹೀದ್ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಹೆಚ್​ಬಿ ಪ್ರಭಾಕರ್ ಶಾಸ್ತ್ರಿ ಮತ್ತು ನ್ಯಾ.ಅನಿಲ್ ಕೆ ಕಟ್ಟಿ ಅವರ ವಿಭಾಗೀಯ ಪೀಠ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಸಲ್ಲಿಕೆ ಮಾಡಿರುವ ಆರೋಪಿಗಳು (Accused) ಪ್ರಕರಣದಲ್ಲಿ ಸಕ್ರಿಯ ಪಾತ್ರವಹಿಸಿದ ಬಗ್ಗೆ ಸಾಕ್ಷ್ಯಗಳು ಲಭ್ಯ ಇವೆ. ಆದ್ರೆ ಘಟನೆ ನಡೆದ ಸ್ಥಳದಲ್ಲಿ ಮೂವರು ಇರಲಿಲ್ಲ. ಪ್ರವೀಣ್ ನೆಟ್ಟಾರ್ ಹತ್ಯೆಯ ಸಂಚಿನ ಚರ್ಚೆಯಲ್ಲಿ ಭಾಗವಹಿಸಿದ್ದರು. ಪಿತೂರಿ ರೂಪಿಸಲು ಯಾವುದೇ ಬಹಿರಂಗ ಕ್ರಿಯೆಯನ್ನು ಮಾಡುವ ಅಗತ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.ಮೂವರು ಆರೋಪಿಗಳು ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕೆ ನಾಲ್ಕು ಸಾಕ್ಷ್ಯಗಳಿವೆ. ಆರೋಪಿಗಳ ಫೋನ್​ ಕರೆಯಲ್ಲಿ ಸಂಚು ನಡೆಸಿರೋದು ಕಂಡು ಬರುತ್ತದೆ. ಈ ಪ್ರಕರಣದಲ್ಲಿ ಆರೋಪಿಗಳು ಸಕ್ರಿಯ ಮತ್ತು ಗಮನಾರ್ಹ ಪಾತ್ರ ವಹಿಸಿರೋದು ಸಾಕ್ಷ್ಯಗಳಲ್ಲಿ ಕಂಡು ಬಂದಿರುತ್ತದೆ. ಈ ಎಲ್ಲಾ ಸಾಕ್ಷ್ಯಗಳು ನ್ಯಾಯಾಲಯದ ಮುಂದಿವೆ ಎಂದು ಪೀಠ ಹೇಳಿದೆ.

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close