Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಫ್ರೆಷರ್ಸ್ ಡೇ ಆಚರಣೆ webnewskannada

WEB NEWS KANNADA

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಫ್ರೆಷರ್ಸ್ ಡೇ ಆಚರಣೆ webnewskannada

Posted On: WebNews Kannada

 WebNewsKannada ಬ್ರಹ್ಮಾವರ:  ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಗುರುತಿಸಿ ಸ್ವಾಗತಿಸುವ ಕಾರ್ಯಕ್ರಮವನ್ನು ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ

 ಆಚರಿಸಲಾಯಿತು .ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ  ಪ್ರಮೋದ್ ಮಧ್ವರಾಜ್ ಮಾಜಿ ಮೀನುಗಾರಿಕಾ ಸಚಿವರು ಆಗಮಿಸಿದ್ದರು. ಹಾಗೂ ವಿದ್ಯಾಲಕ್ಷ್ಮೀ ಸಂಸ್ಥೆಯ ಹೆಮ್ಮೆಯ ಹಳೆ ವಿದ್ಯಾರ್ಥಿಗಳಾಗಿರುವ ಕುಮಾರಿ ರಮ್ಯಾ , ಕುಮಾರಿ ಸೌಜನ್ಯ ಮತ್ತು ಪ್ರಭಾಕರ ತಿಂಗಳಾಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಬಡನಿಡಿಯೂರು,ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಶ್ರೀ ಸುಬ್ರಮಣ್ಯ ಅವರು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ  ಹಿತನುಡಿಗಳನ್ನಾಡಿ ಶುಭ ಹಾರೈಸಿದರು. ನಿರ್ದೇಶಿಕಿಯಾದ ಶ್ರೀಮತಿ ಮಮತಾ ,ಪ್ರಾಂಶುಪಾಲರಾದ ಶ್ರೀಮತಿ ಡಾ. ಸೀಮಾ ಜಿ ಭಟ್, ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು , ಎಲ್ಲಾ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಕುಮಾರಿ ಸ್ವಾತಿ ನಿರೂಪಿಸಿದರೆ ,ಉಪನ್ಯಾಸಕಿ ಶ್ರೀಮತಿ ಮಧುಮಿತಾ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಅನುಪಮ ಪಿ ಭಟ್ ವಂದಿಸಿದರು
ADSENSE CODE - 1

ADSENSE CODE - 1





<
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close