ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ webnewskannada
ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
ಕಾನೂನು ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎನ್ನುವ ದೃಷ್ಟಿಕೋನದಿಂದ ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆ ಬ್ರಹ್ಮಾವರ ಇಲ್ಲಿನ ಆ್ಯಂಟಿ ರ್‍ಯಾಗಿಂಗ್ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಮತ್ತು ಜಿಲ್ಲಾ ವಕೀಲರ ಸಂಘ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Updated on: Oct 18, 2023
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಮತಿ ಶರ್ಮಿಳಾ ಎಸ್ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಲೀಗಲ್ ಸರ್ವಿಸ್ ಅಥಾರಿಟಿ ಉಡುಪಿ ಇವರು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಜಾಗೃತಿ ಕುರಿತಾಗಿ ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಕಾನೂನು ಜೀವನದ ಅವಿಭಾಜ್ಯ ಅಂಗವಾಗಿದೆ. ಸಮಸ್ಯೆಗಳು ಬಂದಾಗ ಅದಕ್ಕೆ ಸೂಕ್ತವಾದ ಪರಿಹಾರವನ್ನು ಪಡೆದುಕೊಳ್ಳಬೇಕೆಂದು ಅಧ್ಯಕ್ಷರು ಮಾನವ ಹಕ್ಕು ಪ್ರಾಧಿಕಾರ ಉಡುಪಿ ಶ್ರೀಮತಿ ಪ್ರೀತಿ ವೈ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಚಂದ್ರ ಅಮೀನ್ ಕಾರ್ಯದರ್ಶಿ ಮಾನವ ಹಕ್ಕು ಪ್ರಾಧಿಕಾರ ಉಡುಪಿ, ಶ್ರೀ ಮಿತ್ರ ಕುಮಾರ್ ಶೆಟ್ಟಿ, ಉದಯ ನಾಯಕ್ ವಕೀಲರು ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ ,ಪ್ರಾಂಶುಪಾಲರದ ಡಾ.ಸೀಮಾ ಜಿ .ಭಟ್ ಹಾಗೂ. ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು ,ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಸ್ವಾತಿ ನಿರ್ವಹಿಸಿದರು..




