Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿದ್ಯಾವೈಭವ ಫೆಸ್ಟ್ webnews kannada

 

ವಿದ್ಯಾವೈಭವ ಫೆಸ್ಟ್

ಕಾಲೇಜು ಫೆಸ್ಟ್ ಎಂಬುದು ವಿದ್ಯಾರ್ಥಿಗಳಿಗೆ ಆಕರ್ಷಕ ಕಾರ್ಯ ಚಟುವಟಿಕೆ, ಮನೋರಂಜನಾ ಕಾರ್ಯಕ್ರಮ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೊರ ತರುವ ಅವಕಾಶ ಒದಗಿಸುತ್ತದೆ. ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಬಿ.ಸಿ.ಎ, ಬಿ.ಬಿ.ಎ, ಬಿ.ಕಾಂ ,ಹೋಟೆಲ್ ಮ್ಯಾನೇಜ್ಮೆಂಟ್ ,ಫ್ಯಾಷನ್ ಡಿಸೈನ್‌,ಫುಡ್ ಟೆಕ್ನಾಲಜಿ ಎಲ್ಲಾ ವಿಭಾಗದ ವತಿಯಿಂದ ವಿದ್ಯಾ ವೈಭವ ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು.

https://www.webnewskannada.com/
WEBNEWSKANNADA
WebNewsKannada​ | 

Updated on: nov 27, 2023

ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ವೈವಿಧ್ಯಮಯ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಣೆಯನ್ನು ನಡೆಸಲಾಯಿತು. ಹಾಗೂ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳು ರಚಿಸಿದ ವಿವಿಧ ವಸ್ತುಗಳ ವಸ್ತು ಪ್ರದರ್ಶನ , ಹಾಗೂ ಸ್ವತಃ ವಿದ್ಯಾರ್ಥಿಗಳೇ ತಯಾರಿಸಿದ ಆಹಾರ ಉತ್ಪನ್ನಗಳ ಮಾರಾಟ , ಎವಿಯೇಷನ್ ವಿದ್ಯಾರ್ಥಿಗಳಿಂದ ವಿವಿಧ ಮಾದರಿ ತಯಾರಿಕೆಯ ವಸ್ತು ಪ್ರದರ್ಶನ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಸಾಧು ಸಾಲಿಯಾನ್ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಂಕರನಾರಾಯಣ ದೇವಸ್ಥಾನ ಕೊಡವೂರು ಹಾಗೂ ಯಶಸ್ಸಿ ಫಿಶ್ ಮಿಲ್ ಮತ್ತು ಆಯಿಲ್ ಕಂಪನಿಯ ಮಾಲೀಕರು ಹಾಗೂ ಶ್ರೀಮತಿ ಅಸ್ಮಿತಾ ಮ್ಯಾನೇಜರ್ ಎಲ್ ಅಂಡ್ ಡಿ ನೀವಿಯಸ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್, ಪ್ರಭಾಕರ ತಿಂಗಳಾಯ ಹಾಗೂ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಅನ್ಸೀಟಾ ಸ್ವಾಗತಿಸಿ, ಉಪನ್ಯಾಸಕ ಗ್ಲಾನೆಲ್ ವಂದಿಸಿ, ಉಪನ್ಯಾಸಕಿ ಕುಮಾರಿ ಸ್ವಾತಿ ಕಾರ್ಯಕ್ರಮವನ್ನು ನಿರೂಪಿಸಿದರು.  

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close