Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆ-webnews kannada

 

ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆ-webnews kannada

ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ವಿಶೇಷ ಗ್ರಾಮ ಸಭೆಯು ಇತ್ತೀಚೆಗೆ ಕೋಟತಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ.ಸತೀಶ್ ಕುಂದರ್ ಬಾರಿಕೆರೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

https://www.webnewskannada.com/
WEBNEWSKANNADA
WebNewsKannada​ | 

Updated on: nov 16, 2023


ಪಂಚಾಯತ್ ಸದಸ್ಯರು ಹಾಗೂ ವಕೀಲರಾದ ಹೆಚ್ ಪ್ರಮೋದ ಹಂದೆ ಅವರು ಕಾನೂನು ಮಾಹಿತಿ ನೀಡಿದರು ಹಾಗೂ "ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಂವಿಧಾನದ ಆಶಯದಂತೆ ಸಾಮಾಜಿಕ, ಆರ್ಥಿಕವಾಗಿ


ಸಾಮರಸ್ಯ ಅಡಿಯಲ್ಲಿ ಜೀವನ ಸಾಗಿಸಬೇಕು, ಯಾವುದೇ ಕೀಳರಿಮೆ ಇಲ್ಲದೆ ಇತರ ಸಮುದಾಯದಂತೆ ಮುಂದೆ ಬರಬೇಕು" ಎಂದು ಹೇಳಿದರು. ಅಧ್ಯಕ್ಷರಾದ ಕೆ ಸತೀಶ್

ಕುಂದರ್ ಬಾರಿಕೆರೆ ಅವರು "ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳಲ್ಲಿ ಹೆಚ್ಚಿನ

ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಬಗ್ಗೆ ತಿಳಿಸುವಂತೆ ಮನವಿ ಮಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬುಟ್ಟಿ ನೇಯ್ಗೆ,

ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ಸಹಾಯದ ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ. ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಮೋದ್ ಹಂದೆ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ಶ್ರೀಮತಿ ವಿದ್ಯಾ ಪಿ, ಶ್ರೀಮತಿ. ಜ್ಯೋತಿ, ಶ್ರೀಮತಿ ಅಶ್ವಿನಿ, ಶ್ರೀಮತಿ ಸೀತಾ,ಸಮಾಜ ಕಲ್ಯಾಣ ಇಲಾಖೆಯ ಗುರು ರಾವ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು, ಸಾರ್ವಜನಿಕರು, ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸದಸ್ಯರಾದ ವಾಸು ಪೂಜಾರಿ ಅವರು ಸ್ವಾಗತಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರ ರಾವ್ ಅವರು ನಿರೂಪಿಸಿದರು ಹಾಗೂ ಕಾರ್ಯದರ್ಶಿ ಸುಮತಿ ಅಂಚನ್ ಅವರು ವಂದಿಸಿದರು. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close